ಚುಟಕ

Author : ಜಿ.ಪಿ. ರಾಜರತ್ನಂ

Pages 42




Year of Publication: 1933
Published by: ಪ್ರೋಗ್ರೆಸ್ ಬುಕ್ ಸ್ಟಾಲ್
Address: ಮೈಸೂರು

Synopsys

ಕವಿ ಜಿ.ಪಿ. ರಾಜರತ್ನಂ ಅವರು ಪ್ರಮುಖವಾಗಿ ಮಕ್ಕಳ ಕವಿಗಳು. ಅವರ ಸಾಹಿತ್ಯಕ ಉದ್ದೇಶದ ಕೇಂದ್ರವೂ ಮಕ್ಕಳೇ ಆಗಿರುತ್ತಾರೆ. ಚುಟಕ-ಮಕ್ಕಳಿಗಾಗಿ ಬರೆದ ಕವನ ಸಂಕಲನವಿದು. ವಾರಕ್ಕೆ ಏಳೇ ದಿನ, ಸುರುಸುರು ಬತ್ತಿ, ರೊಟ್ಟಿಯಂಗಡಿಯ ಕಿಟ್ಟಪ್ಪ, ಗುಳ್ಳೆ ನರಿ ಹೀಗೆ ಒಟ್ಟು 21 ಕವನಗಳಿವೆ. ಪ್ರತಿ ಕವನಕ್ಕೂ ಅನ್ವಯವಾಗುವ ಹಾಗೆ ಸುಂದರವಾದ ಚಿತ್ರಗಳನ್ನು ಬಿಡಿಸಿದವರು ಎಂ.ವಿ. ಸೀತಾರಾಮಯ್ಯನವರು.

About the Author

ಜಿ.ಪಿ. ರಾಜರತ್ನಂ
(05 December 1904 - 13 March 1979)

ಆಡುಮಾತಿನ ಪದಗಳ ಬಳಕೆಯ ‘ರತ್ನನ ಪದಗಳು’ ಮೂಲಕ ಜನಪ್ರಿಯರಾಗಿದ್ದ ಜಿ.ಪಿ. ರಾಜರತ್ನಂ ಅವರು ಕನ್ನಡ ಸಾಹಿತ್ಯದ ಪರಿಚಾರಿಕೆಗೂ ಹೆಸರಾಗಿದ್ದರು. ರಾಜರತ್ನಂ ಅವರು ಜನಿಸಿದ್ದು ಬೆಂಗಳೂರು ಜಿಲ್ಲೆಯ ರಾಮನಗರದಲ್ಲಿ 1908ರ ಡಿಸೆಂಬರ್ 8 ರಂದು. ತಂದೆ ಜೆ.ಪಿ. ಗೋಪಾಲಕೃಷ್ಣಯ್ಯಂಗಾರ್. ರಾಜರತ್ನಂ ಅವರು ಮೈಸೂರಿನಲ್ಲಿ ಪ್ರೌಢಶಾಲಾ ಶಿಕ್ಷಣ ಮುಗಿಸಿ, ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ. ಮತ್ತು ಮೈಸೂರು ಮಹಾರಾಜ ಕಾಲೇಜಿನಲ್ಲಿ ಎಂ.ಎ. ಪದವಿ ಗಳಿಸಿದರು. ಅನಂತರ ಮೈಸೂರು, ತುಮಕೂರು, ಶಿವಮೊಗ್ಗ, ಬೆಂಗಳೂರು ಕಾಲೇಜುಗಳಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು 1964ರಲ್ಲಿ ನಿವೃತ್ತರಾದ ಮೇಲೆ ಯುಜಿಸಿ ಉಪಾಧ್ಯಾಯರಾಗಿ ಕೆಲವು ಕಾಲ ಸೇವೆ ಸಲ್ಲಿಸಿದರು. ಕವಿ, ...

READ MORE

Related Books