ಸಿನಿಮಾ ಒಂದು ಜನಪದ ಕಲೆ

Author : ಬರಗೂರು ರಾಮಚಂದ್ರಪ್ಪ

Pages 192

₹ 170.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 26617755

Synopsys

ಲೇಖಕ ಬರಗೂರು ರಾಮಚಂದ್ರಪ್ಪ ಅವರ ಸಿನಿಮಾ ಮಾಧ್ಯಮದ ಕುರಿತ ಲೇಖನಗಳ ಸಂಕಲನ ‘ಸಿನಿಮಾ ಒಂದು ಜನಪದ ಕಲೆ’. ವಿವಿಧ ಸಂದರ್ಭಗಳಲ್ಲಿ ಬರೆದ ಲೇಖನಗಳು ಈ ಕೃತಿಯಲ್ಲಿವೆ. ಕೆಲವು ಲೇಖನಗಳು ಹೊಸ ಚರ್ಚೆ ಮತ್ತು ಚಿಂತನೆಗಳನ್ನು ಒಳಗೊಂಡಿವೆ.

ಬರಗೂರು ರಾಮಚಂದ್ರಪ್ಪನವರು ಸಾಹಿತ್ಯ, ಸಿನಿಮಾ ಮತ್ತು ಜನಸಂಸ್ಕೃತಿಯ ಕ್ಷೇತ್ರಗಳಲ್ಲಿ ತಮ್ಮದೇ ವಿಶಿಷ್ಟ ಚಿಂತನೆ ಮತ್ತು ಕ್ರಿಯೆಗಳ ಮೂಲಕ ಬರೆದ ಕೃತಿ, ಸಾಮಾಜಿಕ-ಸಾಂಸ್ಕೃತಿಕ ಅಧ್ಯಯನದ ದೃಷ್ಟಿಯಿಂದ ಮೌಲಿಕವೆನಿಸಿದೆ. 

 

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books