ದಾಳ

Author : ಎಸ್.ಜಿ. ಸಿದ್ಧರಾಮಯ್ಯ

Pages 63

₹ 30.00




Year of Publication: 2016
Published by: ಅಪೂರ್ವ ಪ್ರಕಾಶನ
Address: ಬೆಂಗಳೂರು

Synopsys

‘ದಾಳ’ ಹಿರಿಯ ಲೇಖಕ ಎಸ್. ಜಿ. ಸಿದ್ದರಾಮಯ್ಯ ಅವರ ಕೃತಿ. ಇದು ಬೆಂಗಳೂರು ವಿಶ್ವವಿದ್ಯಾಲಯದ ಬಿ.ಎಸ್ಸಿ. 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪಠ್ಯವಾದ ನಾಟಕ ಕೃತಿ. ತಮ್ಮ ವಿಭಿನ್ನ ಶೈಲಿಯ ಬರಹ, ಸಂಭಾಷಣೆಯಿಂದ, ಸನ್ನಿವೇಶಗಳ ಜೋಡೆಣೆಯ ಕಲಾತ್ಮಕತೆಯಿಂದ ಈ ಕೃತಿ ಗಮನ ಸೆಳೆಯುತ್ತದೆ.

About the Author

ಎಸ್.ಜಿ. ಸಿದ್ಧರಾಮಯ್ಯ
(19 November 1946)

ಹಿರಿಯ ಸಾಹಿತಿಗಳಾದ ಎಸ್.ಜಿ. ಸಿದ್ಧರಾಮಯ್ಯನವರು ಹುಟ್ಟಿದ್ದು ತುಮಕೂರು ಜಿಲ್ಲೆಯ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಸಿಂಗಾಪುರ ಗ್ರಾಮದಲ್ಲಿ. ತಂದೆ-ಗುರುಭಕ್ತಯ್ಯ, ತಾಯಿ-ರೇವಮ್ಮ. ಪ್ರಾರಂಭಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪಡೆದ ಅವರು  ಪ್ರೌಢಶಾಲೆ ಚಿಕ್ಕನಾಯಕನಹಳ್ಳಿ ಪೂರ್ಣಗೊಳಿಸಿದರು. ಕಾಲೇಜು ವಿದ್ಯಾಭ್ಯಾಸವನ್ನು ತುಮಕೂರಿನಲ್ಲಿ ಆರಂಭಿಸಿದ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು. ಆನಂತರ ತುಮಕೂರಿನ ಸಿದ್ಧಗಂಗಾ ಕಾಲೇಜಿನಲ್ಲಿ ಅಧ್ಯಾಪಕರಾಗಿ ವೃತ್ತಿಜೀವನ ಆರಂಭಿಸಿದ ಅವರು ಮಡಿಕೇರಿ, ಸಿಂಧನೂರು, ತುಮಕೂರು, ಕೊರಟಗೆರೆ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ತುಮಕೂರು, ಚಿಕ್ಕನಾಯಕನ ಹಳ್ಳಿ, ಹೊಸದುರ್ಗ, ಮಧುಗಿರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಹುದ್ದೆ ನಿರ್ವಹಿಸಿದ್ದಾರೆ. ಅಲ್ಲದೇ ದುಃಸ್ಥಿತಿಯಲ್ಲಿದ್ದ ಕಾಲೇಜುಗಳಿಗೆ ಶೈಕ್ಷಣಿಕ ಕಾಯಕಲ್ಪ ...

READ MORE

Related Books