ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು

Author : ಬೆ.ಗೋ. ರಮೇಶ್

Pages 120

₹ 60.00




Year of Publication: 2011
Published by: ಚಂದನ ಪ್ರಕಾಶನ
Address: ಬೆಂಗಳೂರು

Synopsys

ಡಾ. ರಾಹಜಕುಮಾರ್ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ಲೇಖಕ ಬೆ.,ಗೋ. ರಮೇಶ್ ಅವರ ಕೃತಿ-ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತರು. ಭಾರತದ ಸಿನಿಮಾ ವಲಯದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಎಂದೇ ಹೇಳಲಾಗಿಉವ ದಾದಾಸಾಹೇಬವ್ ಫಾಲ್ಕೆ ಪ್ರಶಸ್ತಿಯನ್ನು ಭಾರತೀಯ ಚಲನಚಿತ್ರ ರಂಗದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ನೀಡಲಾಗುತ್ತದೆ. ಕನ್ನಡ ಚಲನಚಿತ್ರದ ದಂತಕಥೆ, ವರನಟ ಡಾ. ರಾಜಕುಮಾರ್, ಭಾರತೀಯ ವಿವಿಧ ಭಾಷೆಗಳ ಗಾಯನ ಕ್ಷೇತ್ರದಲ್ಲಿ ಲತಾ ಮಂಗೇಶಕರ್ ಸೇರಿದಂತೆ ಇತರೆ ನಾಯಕ ಗಣ್ಯ ಕಲಾವಿದರನ್ನು ಅವರ ಬದುಕು ಹಾಗೂ ಸಾಧನೆಗಳಿಗೆ ಒತ್ತು ನೀಡಿ ಪರಿಚಯಿಸಲಾಗಿದೆ.

About the Author

ಬೆ.ಗೋ. ರಮೇಶ್
(22 August 1945)

ಬೆ.ಗೋ. ರಮೇಶ್ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡ ಹನಸಗೆಯಲ್ಲಿ ಆಗಸ್ಟ್ 22 , 1945ರಲ್ಲಿ ಜನಿಸಿದರು. ತಂದೆ ಗೊವಿಂದರಾಜು, ತಾಯಿ ರಾಧಮ್ಮನವರು. ಅವರ ಪ್ರಾರಂಭಿಕ ಶಿಕ್ಷಣ ನಡೆದದ್ದು ಬೆಂಗಳೂರಿನ ಮಲ್ಲೇಶ್ವರಂ ಶಾಲೆಯಲ್ಲಿ. ಇಂಟರ್‌ಮೀಡಿಯೆಟ್ ಓದಿದ್ದು ಸರಕಾರಿ ಕಾಲೇಜಿನಲ್ಲಿ. ಮುಂದೆ ರಮೇಶರು ಹಾಸನದ ಮಲ್ನಾಡ್ ಎಂಜನಿಯರಿಂಗ್ ಕಾಲೇಜಿನಿಂದ ಬಿ.ಇ. ಪದವಿ ಪಡೆದರು. ಹೆಬ್ಬಾಳದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೆಲಕಾಲ ಉದ್ಯೋಗ ನಿರ್ವಹಿಸಿದ ಬೆ. ಗೋ ರಮೇಶರು ಕರ್ನಾಟಕ ಪವರ್ ಕಾರ್ಪೋರೇಷನ್ನಿನಲ್ಲಿ ಸಹಾಯಕ ಎಂಜನಿಯರಾಗಿ, ಸಹಾಯಕ ಎಕ್ಸುಕ್ಯುಟಿವ್ ಎಂಜನಿಯರಾಗಿ, ಎಕ್ಸಿಕ್ಯುಟಿವ್ ಎಂಜನಿಯರಾಗಿ, ರಾಯಚೂರಿನ ಶಾಕೋತ್ಪನ್ನ ವಿದ್ಯುದಾಗಾರದಲ್ಲಿ ಸೇವೆ ಸಲ್ಲಿಸಿ ...

READ MORE

Related Books