ದಿಬ್ಬದಿಂದ ಹತ್ತಿರ ಆಗಸಕ್ಕೆ

Author : ಕರ್ಕಿ ಕೃಷ್ಣಮೂರ್ತಿ

Pages 152

₹ 175.00




Year of Publication: 2022
Published by: ಅಂಕಿತ ಪುಸ್ತಕ
Address: 53, ಗಾಂಧಿ ಬಜಾರ್ ಮುಖ್ಯರಸ್ತೆ, ಬಸವನಗುಡಿ , ಬೆಂಗಳೂರು -560004
Phone: 08026617100

Synopsys

ಲೇಖಕ ಕರ್ಕಿ ಕೃಷ್ಣಮೂರ್ತಿ ಅವರ ಕತೆಗಳ ಸಂಕಲನ ‘ದಿಬ್ಬದಿಂದ ಹತ್ತಿರ ಆಗಸಕ್ಕೆ'. ಕೃತಿಯಲ್ಲಿ ಲೇಖಕರೇ ಹೇಳುವಂತೆ, ತನಗೆ ಬೇಕಿರುವುದೇನೆಂಬ ಸ್ಪಷ್ಟ ಅರಿವಿಲ್ಲದೇ ಅದಕ್ಕಾಗಿ ಅರಸುವುದು ಆಧುನಿಕ ಮನುಷ್ಯನ ಲಕ್ಷಣವಾಗಿದೆ. ಸತ್ಯಶೋಧನೆಯ ಹಾದಿಯಲ್ಲಿ ನಮ್ಮ ಪೂರ್ವಿಕರು ಕಂಡುಕೊಂಡಿದ್ದ "ನೇತಿ, ನೇತಿ" ಎನ್ನುವ ತತ್ವ ಪ್ರಯೋಗವನ್ನು; ನಾವಿಂದು, "ಇದಲ್ಲ, ಇದೂ ಅಲ್ಲ" ಅನ್ನುತ್ತ ನಮ್ಮ ಸುಖದ ಅನ್ವೇಷಣೆಗೆ ಅಳವಡಿಸಿಕೊಂಡಿದ್ದೇವೆ. ಇರದಿರು ವುದೇನೆಂದು ಗೊತ್ತಿಲ್ಲದೇ ತುಡಿಯುವ ಈ ಸ್ಥಿತಿ ವಿಭಿನ್ನ ಹಾಗೂ ತೀಕ್ಷ್ಣ. ಸಾಲದೆಂಬಂತೆ ಜಾಗತೀಕರಣ, ನಗರವಾಸ, ಕಾರ್ಪೋರೇಟ್ ವ್ಯವಸ್ಥೆ ಇತ್ಯಾದಿಗಳು ಆ ತುಡಿತದ ಕಾವಿಗೆ ಉರುವಲಾಗಿವೆ ಇಂದು. ಸಪ್ತಸಾಗರದಾಚೆಯ ದೇಶವೂ ನಮ್ಮ ನೆರೆಮನೆಯಷ್ಟೇ ಹತ್ತಿರವೆನಿಸಬಹುದಾದ ಕಾಲಘಟ್ಟದಲ್ಲೂ, ಈ ವಿದೇಶದ ಆಕರ್ಷಣೆ ನಮ್ಮಲ್ಲಿನ್ನೂ ಮಾಸಿಲ್ಲ. ಇದೂ ಆ ಅರಸುವಿಕೆಯ ಒಂದು ಭಾಗವೇ ಆಗಿರಬಹುದು. ಅಂಥಹುದೇ ಹುಡುಕಾಟದ, ವಿದೇಶೀ ನೆಲದ ಕಥೆಗಳೇ ಹೆಚ್ಚಿರುವ ಈ ಸಂಗ್ರಹಕ್ಕೆ `ದಿಬ್ಬದಿಂದ ಹತ್ತಿರ ಆಗಸಕ್ಕೆ' ಎನ್ನುವ ಹೆಸರು ಸೂಕ್ತ ಎನಿಸಿತು ನನಗೆ ಎಂದಿದ್ದಾರೆ. ಕೃತಿಯ ಪರಿವಿಡಿಯಲ್ಲಿ ಅದು ಹಾಗೆ, ಕಾಣದ ಗೆರೆಗಳು, ಸಮಾಧಿ ಶಿವು, ತುದಿ, ಬಂದರ್ -ಎ- ಅಬ್ಬಾಸ್ , ಕಾಯುವ ಕಾಯಕ,ಸನ್ನೆ, ಜಂಜಿ ಡಪಾತಿ ಎಂಬ ಶೀರ್ಷಿಕೆಗಳ ಕತೆಗಳಿವೆ.

About the Author

ಕರ್ಕಿ ಕೃಷ್ಣಮೂರ್ತಿ

ಕರ್ಕಿ ಕೃಷ್ಣಮೂರ್ತಿ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿಯವರು. ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್. ಕೆಲಸದ ನಿಮಿತ್ತ ಮಸ್ಕತ್ ಹಾಗೂ ದುಬೈನಲ್ಲಿ ಕೆಲ ವರ್ಷ ನೆಲೆಸಿದ್ದು, ಪ್ರಸ್ತುತ ಬೆಂಗಳೂರಿನ ಕೊಲಿಯರ್ರ್ಸ್ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ವೈಸ್ ಪ್ರೆಸಿಡೆಂಟ್ ಆಗಿದ್ದಾರೆ. ಓದು, ಸಿನೆಮಾ, ನಾಟಕ, ಪರ್ಯಟನೆ ಇವರ ಆಸಕ್ತಿಯ ಕ್ಷೇತ್ರಗಳು. 'ಮಳೆ ಮಾರುವ ಹುಡುಗ' 'ಗಾಳಿಗೆ ಮೆತ್ತಿದ ಬಣ್ಣ' ಅವರ ಕಥಾಸಂಕಲನಗಳು. 'ಚುಕ್ಕಿ ಬೆಳಕಿನ ಜಾಡು' ಕಾದಂಬರಿ ಪ್ರಕಟಿತ. 'ಸುಗಂಧಿ' ವಿಶೇಷಾಂಕದ ಸಂಪಾದಕರಾಗಿದ್ದರು. ‘ಮಾಸ್ತಿ ಕಥಾ ಪುರಸ್ಕಾರ, ಬೇಂದ್ರೆ ಗ್ರಂಥ ಬಹುಮಾನ, ಕನ್ನಡ ಸಾಹಿತ್ಯ ಪರಿಷತ್ತಿನ ಆರ್.ಎನ್ ಹಬ್ಬು ದತ್ತಿ ಪ್ರಶಸ್ತಿ, ಸ್ವಸ್ತಿ ಪ್ರಕಾಶನದ ...

READ MORE

Related Books