ಡಾ. ರಾಜ್‌‌ಕುಮಾರ್

Author : ಕಾಶೀನಾಥ ಅಂಬಲಗೆ

Pages 64

₹ 25.00




Year of Publication: 2018
Published by: ಪ್ರಗತಿ ಪ್ರಕಾಶನ
Address: #39, ಕುಸನೂರು ರಸ್ತೆ, ಜಯನಗರ, ಕಲಬುರಗಿ-585105

Synopsys

ಮಕ್ಕಳ ಬೆಳವಣಿಗೆ ಹಂತದಲ್ಲಿ ಉತ್ತಮ ಮಾದರಿ ವ್ಯಕ್ತಿತ್ವದ ಚಿತ್ರಣಗಳಿರಬೇಕು. ಆದ್ದರಿಂದ, ಸ್ವಾಮಿ ವಿವೇಕಾನಂದರು, ಮಹಾತ್ಮಗಾಂಧೀ, ಜ್ಯೋತಿಬಾ ಫುಲೆ, ಡಾ. ಬಿ.ಆರ್. ಅಂಬೇಡ್ಕರ್ ಇಂತಹ ಮಹನೀಯರ ಜೀವನ ಚರಿತ್ರೆಯನ್ನು ಮಕ್ಕಳಿಗೆ ತಿಳಿಯುವ ಹಾಗೆ ಬರೆದಿದ್ದಾಗಿ ಲೇಖಕ ಕಾಶೀನಾಥ ಅಂಬಲಗೆ ಅವರು ಕೃತಿಯ ಆರಂಭದಲ್ಲೇ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಕನ್ನಡದ ಮೇರು ನಟ ಡಾ. ರಾಜ್ ಕುಮಾರ್ ಬದುಕು ಸಹ ಮಾದರಿ. ಆದ್ದರಿಂದ, ಮಕ್ಕಳಿಗಾಗಿ ಡಾ. ರಾಜ್ ಅವರ ವ್ಯಕ್ತಿತ್ವದ ಪರಿಚಯ ಮಾಡಿರುವುದೇ ಈ ಕೃತಿ ಎಂದು ಲೇಖಕರು ಹೇಳಿದ್ದಾರೆ.

About the Author

ಕಾಶೀನಾಥ ಅಂಬಲಗೆ
(10 July 1947)

ಕಾಶೀನಾಥ ಅಂಬಲಗೆ ಅವರು ಹುಟ್ಟಿದ್ದು 10-07-1947 ರಲ್ಲಿ. ಬೀದರ ಜಿಲ್ಲೆಯ, ಬಸವಕಲ್ಯಾಣ ತಾಲೂಕಿನ ಮುಚಳಂಬಿ ಎಂಬ ಗ್ರಾಮದಲ್ಲಿ. ಇವರ ತಂದೆ ರಾಚಪ್ಪ ಅಂಬಲಗೆ, ತಾಯಿ ಗುರಮ್ಮ ಅಂಬಲಗೆ. ಕನ್ನಡದಲ್ಲಿ ಎಂ.ಎ ಪದವಿ ಪಡೆದ ಅಂಬಲಗೆ ಹಿಂದಿ ಭಾಷೆಯಲ್ಲೂ ಎಂ.ಎ ಪದವಿ ಗಳಿಸಿದ್ದಾರೆ. ಬಿ.ಎಡ್ ಜೊತೆಗೆ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ಪಿಎಚ್.ಡಿ ಪದವಿಯನಂತರ ಅಧ್ಯಾಪಕ ವೃತ್ತಿಯನ್ನು ಆಯ್ದುಕೊಂಡ ಅವರು ಮಹಾವಿದ್ಯಾಲಯದಲ್ಲಿ 21ವರ್ಷ, ವಿಶ್ವವಿದ್ಯಾಲಯದಲ್ಲಿ 12 ವರ್ಷ ಹಿಂದಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜೊತೆಗೆ ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿಯೂ ತೊಡಗಿಸಿಕೊಂಡಿದ್ದಾರೆ.  ಕವಿ, ಲೇಖಕ, ಸಾಹಿತಿ, ಕಾದಂಬರಿಗಾರರಾದ ಅಂಬಲಗೆ ಅನುವಾದಕರಾಗಿಯೂ ಪ್ರಸಿದ್ಧರು. ಜೊತೆಗೆ ...

READ MORE

Related Books