ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ-4

Author : ಸಿದ್ಧಲಿಂಗಯ್ಯ

Pages 546

₹ 470.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು
Phone: 08022107704

Synopsys

ಕವಿ ಡಾ. ಸಿದ್ದಲಿಂಗಯ್ಯನವರು 1997ರಲ್ಲಿ ಪ್ರಕಟಿಸಿದ ಸಂಶೋಧನಾ ಪ್ರಬಂಧ ಗ್ರಾಮದೇವತೆಗಳು. ಕನ್ನಡ ಸಂಶೋಧನಾ ಸಾಹಿತ್ಯದಲ್ಲಿಯೇ ವಿಶಿಷ್ಟವಾದ ಕೃತಿ ಎಂದು ಈಗಲೂ ಇದು ಜನಪ್ರಿಯ. 

’ಅವತಾರಗಳು’ ಅವರ ವಿನೋದಮಯ ಸಾಂಸ್ಕೃತಿಕ ಪ್ರಬಂಧ ಸಂಕಲನ. ’ಗ್ರಾಮದೇವತೆಗಳು’ ಸಂಶೋಧನೆಯಲ್ಲಿ ತೊಡಗಿದ್ದ ಸಿದ್ದಲಿಂಗಯ್ಯನವರು ಕಂಡು ಅನುಭವಿಸಿದ ಹಾಸ್ಯಮಯ ಸನ್ನಿವೇಶಗಳನ್ನು ಅವರದೇ ಅನನ್ಯ ಶೈಲಿಯಲ್ಲಿ ಕಟ್ಟಿಕೊಟ್ಟಿದ್ದಾರೆ. 

ಈ ಎರಡೂ ಕೃತಿಗಳನ್ನು ಒಳಗೊಂಡಿದೆ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ’ಡಾ. ಸಿದ್ಧಲಿಂಗಯ್ಯ ಸಮಗ್ರ ಸಾಹಿತ್ಯ ಸಂಪುಟ’ದ ನಾಲ್ಕನೇ ಭಾಗ. 

About the Author

ಸಿದ್ಧಲಿಂಗಯ್ಯ
(03 February 1954)

ದಲಿತ ಕವಿ ಎಂದು ಗುರುತಿಸಲಾಗುವ ಡಾ. ಸಿದ್ಧಲಿಂಗಯ್ಯ ಅವರು ದಲಿತ-ಬಂಡಾಯ ಸಾಹಿತ್ಯ ಚಳುವಳಿಯ ಪ್ರಮುಖ ಕವಿ-ಹೋರಾಟಗಾರ. ಮಾಗಡಿಯಲ್ಲಿ 1954ರ ಫೆಬ್ರುವರಿ 3ರಂದು ಜನಿಸಿದರು. ತಾಯಿ ವೆಂಕಮ್ಮ- ತಂದೆ ದೇವಯ್ಯ. ಬಡತನದಲ್ಲಿಯೇ ಗ್ರಾಮೀಣ ಭಾಗದ ಶಾಲೆಗಳಲ್ಲಿ ತಮ್ಮ ಪ್ರಾರಂಭಿಕ ಶಾಲಾ ವಿದ್ಯಾಭ್ಯಾಸ ಮಾಡಿ ಎಂ.ಎ. ಪದವಿಗಳಿಸಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ, ನಿರ್ದೇಶಕರಾಗಿ, ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಡಾ. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಲ್ಲಿ ಸೇವೆ ಸಲ್ಲಿಸಿದ ನಂತರ ಸಿದ್ಧಲಿಂಗಯ್ಯನವರು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. ನಡೆದ ಅಖಿಲ ಕರ್ನಾಟಕ ...

READ MORE

Related Books