ಎಲ್ಲರಿಗೂ ಬೇಕಾದ ಅಂಬೇಡ್ಕರ್

Author : ಜಿ.ಬಿ. ಹರೀಶ

Pages 144

₹ 150.00




Year of Publication: 2016
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪೀಕರ್ ಬೀದಿ, ಹುಬ್ಬಳ್ಳಿ- 580020
Phone: 0836-2367676

Synopsys

‘ಎಲ್ಲರಿಗೂ ಬೇಕಾದ ಅಂಬೇಡ್ಕರ್’ ಗೊತ್ತೇ ಇರದ ಅವೆಷ್ಟೋ ಸಂಗತಿಗಳು. ಡಾ. ಜಿ.ಬಿ. ಹರೀಶ ಅವರ ಪ್ರಮುಖ ಕೃತಿ. ಡಾ. ಭೀಮರಾವ್ ಅಂಬೇಡ್ಕರ್ ಖಂಡಿತವಾಗಿಯೂ ಯಾವುದೋ ಒಂದು ವರ್ಗಕ್ಕೆ ಸೇರಿದವರಲ್ಲ. ಅಂಬೇಡ್ಕರ್ ಈ ದೇಶದ ಆಸ್ತಿ. ಈ ದೇಶ ಕಂಡ ಅಪ್ರತಿಮ ಚಿಂತಕ ಆದರೆ ಕಾಲಾಂತರದಲ್ಲಿ ಅಂಬೇಡ್ಕರ್ ಅವರನ್ನು ಒಂದು ವರ್ಗಕ್ಕೆ ಸೀಮಿತ ಮಾಡಿ ಅವರ ವ್ಯಕ್ತಿತ್ವವನ್ನು ಕುಬ್ಜವಾಗಿ ಮಾಡುವ ತಪ್ಪು ಕೆಲಸ ನಿರಂತರವಾಗಿ ನಡೆಯಿತು. 

ಮುಖ್ಯವಾಗಿ ಅಂಬೇಡ್ಕರ್ ಓರ್ವ ರಾಷ್ಟ್ರವಾದಿಯಾಗಿದ್ದರು. ಅದೇ ಕಾರಣಕ್ಕೊಸ್ಕರವೇ ಅಥವಾ ರಾಷ್ಟ್ರೀಯ ಅಸ್ಮಿತೆಯನ್ನು ಕಾಯ್ದುಕೊಳ್ಳಲು ಈ ದೇಶದ ಸಂಸ್ಕೃತಿ ಸೊಗಡನ್ನು ಕಾಪಿಟ್ಟುಕೊಂಡು ಹೋಗಬೇಕೆಂಬುದನ್ನು ಬಲವಾಗಿ ಪ್ರತಿಪಾದನೆ ಮಾಡಿದ್ದರು. ಕಾರಣಾಂತರದಿಂದ ಈ ಸತ್ಯ ಹೊರಬರಗೊಡಲಿಲ್ಲ ಅದು ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಮಾಡುವ ಅಪಚಾರವಲ್ಲದೆ ಮತ್ತೇನು ಅಲ್ಲ. ಅಂಬೇಡ್ಕರ್ ಅವರು ಈ ದೇಶದ ಇತಿಹಾಸ ಮತ್ತು ಸಂಸ್ಕೃತಿಯ ಜ್ಞಾನ ಮಾತ್ರವಲ್ಲ. ಆ ನಿಟ್ಟಿನಲ್ಲಿ ಜಾಗತಿಕವಾಗಿ ತೌಲನಿಕ ಅಧ್ಯಯನ ಮಾಡಿ ತಿಳಿವಳಿಕೆ ಹೊಂದಿದ್ದರು. ಈ ಎಲ್ಲಾ ವಿಷಯಗಳ ಕುರಿತು ಕನ್ನಡದಲ್ಲಿ ಇದೇ ಮೊದಲಬಾರಿಗೆ ಪುಸ್ತಕವೊಂದನ್ನು ಡಾ. ಜಿ.ಬಿ. ಹರೀಶ್ ಅವರು ಹೊರತರುತ್ತಿದ್ದಾರೆ. ಎಲ್ಲರಿಗೂ ಬೇಕಾದ ಅಂಬೇಡ್ಕರ್ ಇದೊಂದು ಪುಸ್ತಕ ಎನ್ನುವುದಕ್ಕಿಂತ ಹೆಚ್ಚಾಗಿ ಇತಿಹಾಸ, ಸಂಸ್ಕೃತಿ ಆಸಕ್ತರ ಪಾಲಿಗೊಂದು ಸಂಗ್ರಾಹ್ಯ ಹೊತ್ತಿಗೆ ಆಗಲಿದ್ದಾರೆ ಎನ್ನುತ್ತಾರೆ ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ. 

About the Author

ಜಿ.ಬಿ. ಹರೀಶ

ಜಿ.ಬಿ ಹರೀಶ್ ಅವರು ಹೊಸ ತಲೆಮಾರಿನ ಗಂಭೀರ ವಿಮರ್ಶಕರಲ್ಲಿ ಒಬ್ಬರು. ಕನ್ನಡ ಕಾವ್ಯಗಳು, ಜೈನ, ಬೌದ್ಧ ಮತ್ತು ಶಾಸ್ತ್ರ ಸಾಹಿತ್ಯ ವಿಷಯಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದಾರೆ. ಮೈಸೂರು ವಿ.ವಿ.ಯಿಂದ ಕನ್ನಡ ಸ್ನಾತಕೋತ್ತರ ಪದವಿಯನ್ನು ಪಡೆದು ಕೊಂಡ ಇವರು ದೇವಚಂದ್ರನ ರಾಜಾವಳಿ ಕಥಾಸಾರ: ಜೈನ ಸಾಹಿತ್ಯಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಅಧ್ಯಯನ ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದಿದ್ದಾರೆ. ಸಾಹಿತ್ಯ, ಕಲೆ ಮತ್ತು ತತ್ವಶಾಸ್ತ್ರ ಇವರ ಆಸಕ್ತಿಯ ಕ್ಷೇತ್ರಗಳು, ತುಮಕೂರು ವಿ.ವಿ., ಬೆಂಗಳೂರಿನ ಶೇಷಾದ್ರಿಪುರಂ ಸ್ನಾತಕೋತ್ತರ ಕೇಂದ್ರ, ಎಂ.ಇ.ಎಸ್. ಸ್ನಾತಕೋತ್ತರ ಕೇಂದ್ರ, ಬಿ.ಎಂ.ಶ್ರೀ. ಸ್ಮಾರಕ ಪ್ರತಿಷ್ಠಾನ ಸೇರಿದಂತೆ ಹಲವು ...

READ MORE

Related Books