ಕವಿ ಅರಿಫ್ ರಾಜಾ ಅವರು ರಚಿಸಿದ ಕವನಗಳ ಸಂಕಲನ-ಎದೆಯ ಹಾಲಿನ ಪಾಳಿ. ಕವಿತೆಗಳಿಗೆ ಸಾಮಾಜಿಕ ಹೊಣೆಗಾರಿಕೆ ಇರುತ್ತದೆ. ಸಮಾಜಮಖಿಯಲ್ಲದ ಕವಿತೆಗಳು ತಮ್ಮ ಕಾವ್ಯತ್ವದಿಂದ ವಿಮುಖವಾಗುತ್ತವೆ ಎಂಬ ಧಾಟಿಯಲ್ಲಿ ಇಲ್ಲಿಯ ಕವನಗಳಿವೆ. ಕವಿತೆಗಳ ವಸ್ತು, ಶೈಲಿ, ಪದಲಾಲಿತ್ಯ ಎಲ್ಲವೂ ಓದುಗರ ಗಮನ ಸೆಳೆಯುತ್ತವೆ.
2012ರ ಕೇಂದ್ರ ಸಾಹಿತ್ಯ ಅಕಾಡೆಮಿ ಯುವ ಪ್ರಶಸ್ತಿ ಪುರಸ್ಕೃತ ಆರಿಫ್ ರಾಜ ಅವರು ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಆರಕೆರಾ ಗ್ರಾಮದವರಾದರು. 1983 ಡಿಸೆಂಬರ್ 6ರಂದು ಜನಿಸಿದ ಅವರು ರಾಯಚೂರಿನ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿರುವ ಇವರು ಪ್ರಸ್ತುತ ಬಾಗಲಕೋಟೆಯ ಗವರ್ನಮೆಂಟ್ ಫಸ್ಟ್ ಗ್ರೇಡ್ ಡಿಗ್ರಿ ಕಾಲೇಜ್, ಇಳಕಲ್ ನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಬರೆದಿರುವ ಹಲವು ಕವಿತೆಗಳು ವಿವಿಧ ಭಾಷೆಗಳಿಗೆ ಅನುವಾದಗೊಂಡಿದೆ. ದಿನಕರ ದೇಸಾಯಿ ಪ್ರಶಸ್ತಿ, ಬೇಂದ್ರೆ ಪುಸ್ತಕ ಬಹುಮಾನ, ಗುಲ್ಬರ್ಗ ವಿಶ್ವವಿದ್ಯಾಲಯದ ಪುಸ್ತಕ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ದೊರೆತಿವೆ. ಇವರು ಅನುವಾದಿತ ಕವಿತೆಗಳು ಪರ್ಷಿಯನ್ ಭಾಷೆಯಲ್ಲಿ ರಚಿತವಾದ ಭಾರತದ ...
READ MORE