ಈ ಮುಖೇನ

Author : ಎಚ್. ಎಸ್. ವೆಂಕಟೇಶಮೂರ್ತಿ

Pages 295

₹ 176.00




Year of Publication: 2011
Published by: ಅಂಕಿತ ಪುಸ್ತಕ
Address: #53 ಶಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 0802661 7100

Synopsys

ಕವಿ ಹಾಗೂ ಸಾಹಿತಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಸಾಹಿತ್ಯ-ಸಂಸ್ಕೃತಿ ಕುರಿತು ಕಾಲಕಾಲಕ್ಕೆ ಬರೆದ ಲೇಖನಗಳ ಸಂಗ್ರಹ ಕೃತಿ ಇದು. ವಿಷಯ ವಸ್ತು ವೈವಿಧ್ಯತೆ, ನಿರೂಪಣಾ ಶೈಲಿ, ಸಾಮಾಜಿಕ ಹೊಣೆಗಾರಿಕೆ ಇತ್ಯಾದಿ ಅಂಶಗಳಿಂದ ಇಲ್ಲಿಯ ಲೇಖನಗಳು ಓದುಗರ ಗಮನ ಸೆಳೆಯುತ್ತವೆ.

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Related Books