ಇಂಗ್ಲಿಶ್ ಪದಗಳಿಗೆ ಕನ್ನಡದ್ದೇ ಪದಗಳು

Author : ಡಿ.ಎನ್. ಶಂಕರ ಬಟ್

Pages 336

₹ 250.00




Year of Publication: 2023
Published by: ಬನವಾಸಿ ಬಳಗ ಪ್ರಕಾಶನ
Address: #93, ಗುರುರಾಯ, 5ನೇ ಎ ಕ್ರಾಸ್, 4ನೇ ಮೇನ್, 3ನೇ ಬ್ಲಾಕ್, ತ್ಯಾಗರಾಜನಗರ, ಬೆಂಗಳೂರು-560028
Phone: 9449977880

Synopsys

'ಇಂಗ್ಲಿಶ್ ಪದಗಳಿಗೆ ಕನ್ನಡದ್ದೇ ಪದಗಳು' ಇದೊಂದು ಹೊಸ ಬಗೆಯ ಪದಕೋಶ. ಇಂಗ್ಲಿಶ್ ನುಡಿಯನ್ನು ಸಾಕಷ್ಟು ತಿಳಿದಿದ್ದು, ಅದರಲ್ಲಿ ಬರುವ ಪದಗಳಿಗೆ ಸಮನಾದ ಕನ್ನಡದ್ದೇ ಆದ ಪದಗಳು ಯಾವುವಿವೆ ಎಂಬುದನ್ನು ತಿಳಿಯಬಯಸುವವರಿಗೆ ಇದನ್ನು ರಚಿಸಲಾಗಿದೆ. ಸಾಮಾನ್ಯವಾಗಿ ಇಂಗ್ಲಿಶ್-ಕನ್ನಡ ಪದಕೋಶಗಳಲ್ಲಿ ಇಂಗ್ಲಿಶ್ ಪದಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳಿಗಿಂತಲೂ ಸಂಸ್ಕೃತದಿಂದ ಎರವಲಾಗಿ ಪಡೆದ ತತ್ಸಮ ಪದಗಳನ್ನು ಕೊಡುವುದೇ ಜಾಸ್ತಿ. ಹಾಗಾಗಿ ಕನ್ನಡವೇ ಆದ ಪದಗಳಿದ್ದರೂ ಅವು ಅಂತಹ ಪದಕೋಶಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆ. ಇದರಿಂದಾಗಿ ತಮ್ಮ ಬರಹಗಳಲ್ಲಿ ಕನ್ನಡದವೇ ಆದ ಪದಗಳನ್ನು ಬಳಸಬೇಕೆಂದಿರುವವರಿಗೆ ಅವು ಒತ್ತಾಸೆಯಾಗುವುದಿಲ್ಲ. ಆದರೆ ಈ ಪದಕೋಶದಲ್ಲಿ ಇಂಗ್ಲಿಶ್ ಪದಗಳಿಗೆ ಸಮಾನವಾಗಿರುವಂತಹ ಕನ್ನಡದವೇ ಆದ ಪದಗಳನ್ನು ಕೊಡಲಾಗಿದೆ ಮತ್ತು ಹೊಸಗನ್ನಡ ಪದಗಳನ್ನಲ್ಲದೆ ಹಳೆಗನ್ನಡ ಪದಗಳನ್ನೂ ಕೊಟ್ಟಿದ್ದು ಅವನ್ನು ಹೊಸಗನ್ನಡದಲ್ಲಿ ಬಳಸುವ ಬಗೆ ಹೇಗೆ ಎಂಬುದನ್ನು ಪದಕಂತೆಗಳ ಮೂಲಕ ಮತ್ತು ಹೊಸಗನ್ನಡ ವಾಕ್ಯಗಳ ಮೂಲಕ ಸೂಚಿಸಲಾಗಿದೆ. ಕನ್ನಡದವೇ ಆದ ಪದ ಮತ್ತು ಪ್ರತ್ಯಯಗಳನ್ನು ಬಳಸಿ ಹೊಸದಾಗಿ ಪದಗಳನ್ನು ಉಂಟುಮಾಡಬೇಕೆಂದಿರುವವರಿಗೂ ಈ ಪದಕೋಶ ಒತ್ತಾಸೆಯಾಗಬಲ್ಲುದು. ಅಂತಹ ಹಲವು ಪದಗಳನ್ನು ಈ ಪದಕೋಶದಲ್ಲಿ ತಯಾರಿಸಿ ಕೊಡಲಾಗಿದೆ. ಅವನ್ನು ತಯಾರಿಸಿಕೊಳ್ಳುವಲ್ಲಿ ಕನ್ನಡದ ಒಲವೇನು ಎಂಬುದನ್ನು ವಿವರಿಸಲಾಗಿದೆ.

About the Author

ಡಿ.ಎನ್. ಶಂಕರ ಬಟ್

ಹಿರಿಯ ಲೇಖಕ ಡಿ.ಎನ್. ಶಂಕರ ಬಟ್ ಅವರು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾಶಾಸ್ತ್ರಜ್ಞರು. ಮದ್ರಾಸ್ ವಿಶ್ವವಿದ್ಯಾಲಯದಿಂದ  ಸಂಸ್ಕೃತದಲ್ಲಿ ಸ್ನಾತಕ್ಕೋತ್ತರ ಪದವೀಧರರು.  ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ.ಪದವೀಧರರು. ಅಮೇರಿಕಾದ ಸ್ಟ್ಯಾನ್ಪೋರ್‍ಡ್ ಯುನಿವರ್‍ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯುನಿವರ್‍ಸಿಟಿ, ಬೆಲ್ಜಿಯಂ ದೇಶದ ಆಂಟ್ವೆರ್‍ಪ್ ಯುನಿವರ್‍ಸಿಟಿ, ಜರ್‍ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್‍ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮಯ್ಸೂರಿನಲ್ಲಿರುವ ಬಾರತೀಯ ಬಾಶಾ ಸಂಸ್ತಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಅರಕೆಗಾರರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಅರಕೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ...

READ MORE

Related Books