ಎರಡು ರಷ್ಯನ್ ನೀಳ್ಗತೆಗಳು

Author : ಟಿ.ಪಿ. ಅಶೋಕ

Pages 112

₹ 70.00




Year of Publication: 2008
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಲಿಯೋ ಟಾಲ್‌ಸ್ಟಾಯ್ ಮತ್ತು ನಿಕೊಲಾಯ್ ಗೊಗೋಲ್ ಇಬ್ಬರು ಮಹಾನ್ ಕಥನಕಾರರ ಎರಡು ಕತೆಗಳನ್ನು ಕನ್ನಡಕ್ಕೆ ತರಲಾಗಿದೆ. ಸೊಗಸಾದ ಕನ್ನಡದಲ್ಲಿ ಅನುವಾದಗೊಂಡ ಈ ಕತೆಗಳು ಈಗಾಗಲೇ ನಿಯತಕಾಲಿಕಗಳಲ್ಲಿ ಪ್ರಕಟಗೊಂಡು ಜನಪ್ರಿಯವಾಗಿವೆಯಲ್ಲದೆ ಪ್ರತ್ಯೇಕವಾಗಿ ಪುಸ್ತಕರೂಪದಲ್ಲಿಯೂ ಮುದ್ರಣಗೊಂಡಿವೆ. ಕನ್ನಡದ ಸಾಹಿತ್ಯಾಸಕ್ತರಿಗೆ ಮತ್ತು ಸಾಹಿತ್ಯದ ವಿದ್ಯಾರ್ಥಿಗಳಿಗೆ ಪದೇಪದೇ ಅವಲೋಕನಕ್ಕೆ ಅಗತ್ಯವಾಗುತ್ತವೆಯೆಂಬ ಕಾರಣದಿಂದ ಈ ಆವೃತ್ತಿಯಲ್ಲಿ ಅವುಗಳನ್ನು ಒಟ್ಟಾಗಿ ಪ್ರಕಟಿಸಲಾಗಿದೆ.

About the Author

ಟಿ.ಪಿ. ಅಶೋಕ
(26 August 1955)

ಟಿ. ಪಿ. ಅಶೋಕ ಹುಟ್ಟಿದ್ದು 26-08-1955ರಲ್ಲಿ. ತಮ್ಮ ಸಾಹಿತ್ಯ ವಿಮರ್ಶೆ, ಅನುವಾದ, ಸಂಪಾದನೆ ಮತ್ತು ಅಂಕಣ ಬರಹಳಿಂದ ಟಿ. ಪಿ. ಅಶೋಕ ಪ್ರಸಿದ್ಧರಾಗಿದ್ದಾರೆ. ಸಾಗರದ ಲಾಲ್ ಬಹುದ್ದೂರ್ ಕಾಲೇಜಿನಲ್ಲಿ ಪ್ರಾಧ್ಯಾಪಕರು ಮತ್ತು ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಕಾರನಿರ್ವಹಿಸಿ ನಿವೃತ್ತರಾಗಿದ್ದಾರೆ. ನವ್ಯ ಕಾದಂಬರಿಗಳ ಪ್ರೇರಣೆಗಳು, ಹೊಸ ಹೆಜ್ಜೆ ಹೊಸ ಹಾದಿ, ಕಾರಂತರ ಕಾದಂಬರಿಗಳಲ್ಲಿ ಗಂಡು ಹೆಣ್ಣು, ಸಾಹಿತ್ಯ ಸಂಪರ್ಕ, ವಾಸ್ತವತಾವಾದ, ಸಾಹಿತ್ಯ ಸಂದರ್ಭ, ಶಿವರಾಮಕಾರಂತ: ಎರಡು ಅಧ್ಯಯನಗಳು, ಪುಸ್ತಕ ಪ್ರೀತಿ, ವೈದೇಹಿ ಅವರ ಕಥೆಗಳು, ಯು. ಆರ್. ಅನಂತಮೂರ್ತಿ: ಒಂದು ಅಧ್ಯಯನ, ತೇಜಸ್ವಿ ಕಥನ, ಕುವೆಂಪು ಕಾದಂಬರಿ: ಎರಡು ...

READ MORE

Related Books