ಗಾದೆಗಳ ಗಾರುಡಿ

Author : ಸಿಂಪಿ ಲಿಂಗಣ್ಣ

Pages 148

₹ 95.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಸಿಂಪಿ ಲಿಂಗಣ್ಣ ಅವರ ಕೃತಿ ಗಾದೆಗಳ ಗಾರುಡಿ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಬೆನ್ನುಡಿಯ ಮಾತುಗಳನ್ನು ಖುದ್ದು ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬರೆದಿದ್ದಾರೆ.

About the Author

ಸಿಂಪಿ ಲಿಂಗಣ್ಣ
(11 February 1905 - 05 May 1993)

ಜಾನಪದ ಸಂಶೋಧಕರು, ಕವಿಗಳು, ಪ್ರಬಂಧಕಾರರು, ನಾಟಕಕಾರರೂ ಆದ ಲಿಂಗಣ್ಣನವರು ಹುಟ್ಟಿದ್ದು ವಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಗ್ರಾಮದಲ್ಲಿ. ತಂದೆ ಶಿವಯೋಗಪ್ಪ, ತಾಯಿ ಸಾವಿತ್ರಿ. ಚಿಕ್ಕವಯಸ್ಸಿನಲ್ಲಿಯೆ ತಂದೆ ತಾಯಿಯನ್ನು ಕಳೆದುಕೊಂಡು ಬೆಳದದ್ದು ಅಣ್ಣ ಅತ್ತಿಗೆಯರ ಆರೈಕೆಯಲ್ಲಿ. 1922ರಲ್ಲಿ ಮುಲ್ಕಿ ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ವಿದ್ಯಾಭ್ಯಾಸಕ್ಕೆ ಸೂಕ್ತ ಅವಕಾಶ ದೊರೆಯದೆ ಶಿಕ್ಷಕರ ವೃತ್ತಿಯನ್ನು ಆಯ್ದುಕೊಂಡರು. ಶಿಕ್ಷಕರ ಟ್ರೈನಿಂಗ್‌ ಪರೀಕ್ಷೆಯಲ್ಲಿ ಮುಂಬೈ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಪ್ರಥಮ ಸ್ಥಾನ ಪಡೆದು ಹಲವರು ಬಹುಮಾನಗಳನ್ನು ಗಳಿಸಿದರು. 1925ರಲ್ಲಿ ಉಪಾಧ್ಯಾಯರಾಗಿ ಸೇರಿ ಭತಗುಣಕಿ, ಇಂಗಳೇಶ್ವರ, ಹಲಸಂಗಿ, ಇಂಡಿ, ಚಡಚಣ ಮುಂತಾದೆಡೆಯಲ್ಲೆಲ್ಲಾ ಸೇವೆ ಸಲ್ಲಿಸಿ ...

READ MORE

Related Books