ಲೇಖಕಿ ಆಶಾ ರಘು ಅವರ ಕಾದಂಬರಿ-ಗತ. ಪುನರ್ಜನ್ಮ ಎಂಬ ಪರಿಕಲ್ಪನೆಯು ಭಾರತೀಯರ ಜನಜೀವನದಲ್ಲಿ ಅತ್ಯಂತ ಪ್ರಾಚೀನ. ಪುನರ್ ಜನ್ಮದ ನಂಬಿಕೆ ಆಳವಾಗಿ ಬೇರೂರಿದೆ. ಪುನರ್ಜನ್ಮವು ಇಲ್ಲ. ಜನರ ಧಾರ್ಮಿಕ ಭಾವನೆಗಳನ್ನು ಶೋಷಿಸಲು ಕೆಲವರು ಸೃಷ್ಟಿಸಿದ ತಂತ್ರ ಎಂದು ಹಳಿಯುವವರು ಇದ್ದಾರೆ. ಆದರೆ, ವ್ಯಕ್ತಿಯ ಮರಣ ನಂತರ ಆತ್ಮ ಇಲ್ಲವೇ ಜೀವ ಯಾರ ಕಣ್ಣಿಗೂ ಕಾಣಿಸದೇ ಹೋಗಿ ಮತ್ತೊಂದು ದೇಹದಲ್ಲಿ ಸೇರಿಕೊಳ್ಳುತ್ತದೆ. ದೇಹ ನಶ್ವರ. ಆದರೆ, ಆತ್ಮವಲ್ಲ ಎಂಬ ಭಾವನೆಯು ಪುನರ್ಜನ್ಮದ ಪರಿಕಲ್ಪನೆಯನ್ನು ಜನರು ನಂಬುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಹುಟ್ಟು ಆರಂಭವೂ ಅಲ್ಲ; ಸಾವು ಅಂತಿಮವೂ ಅಲ್ಲ. ಇಂತಹ ಕುತೂಹಲ ಹಾಗೂ ನಿಗೂಢ ಪರಿಕಲ್ಪನೆಗಳನ್ನು ವಸ್ತುವಾಗಿಸಿಕೊಂಡ ಕಾದಂಬರಿ ಇದು. .
ಕಾದಂಬರಿಗಾರ್ತಿಯಾದ ಆಶಾ ರಘುರವರು ಹುಟ್ಟಿದ್ದು 1979ರ ಜೂನ್ 18 ನೇ ತಾರೀಖಿನಂದು. ಬೆಂಗಳೂರಿನವರೇ ಆದ ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ಇದೀಗ ಪೂರ್ಣ ಪ್ರಮಾಣದಲ್ಲಿ ಸಾಹಿತ್ಯ ಕೃಷಿಯಲ್ಲಿಯೇ ತೊಡಗಿಸಿಕೊಂಡಿದ್ದಾರೆ. 'ಆವರ್ತ', 'ಗತ', 'ಮಾಯೆ', 'ಆರನೇ ಬೆರಳು', 'ಬೊಗಸೆಯಲ್ಲಿ ಕಥೆಗಳು', 'ಅಪರೂಪದ ಪುರಾಣ ಕಥೆಗಳು', 'ಚೂಡಾಮಣಿ', 'ಕ್ಷಮಾದಾನ', 'ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು' ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಪಳಕಳ ಸೀತಾರಾಮಭಟ್ಟ ...
READ MORE