ಗೆದ್ದೇ ಗೆಲ್ಲುವೆವು

Author : ಬೇದ್ರೆ ಮಂಜುನಾಥ

Pages 216

₹ 150.00
Year of Publication: 2014
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11 ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಉದ್ಯೋಗ ಎಲ್ಲರಿಗೂ ಅತ್ಯವಶ್ಯಕ. ಎಂಪ್ಲಾಯಬಿಲಿಟಿ ಸ್ಕಿಲ್ಸ್ ಮುಖ್ಯ ಪಾತ್ರ ವಹಿಸುತ್ತದೆ. ಆದರೆ ಉದ್ಯೋಗ ಗಳಿಸಲು ಸ್ಪರ್ಧಾತ್ಮಕ ಪರೀಕ್ಷೆ ಎಂದರೇನು? ಕಲಿಕೆ, ಪರೀಕ್ಷೆಗಳಿಗೆ ಸಿದ್ಧತೆ ನಡೆಸಬೇಕು ಎಂಬುದನ್ನು ಈ ಕೃತಿಯಲ್ಲಿ ತಿಳಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು, ಕಲಿಕೆ - ಗಳಿಕೆಯ ಕೋರ್ಸ್‌ಗಳು, ಅತ್ಯುಪಯುಕ್ತ ವೆಬ್‌ಸೈಟ್ ಮತ್ತು ಪುಸ್ತಕಗಳು ಹಾಗೂ ವ್ಯಕ್ತಿತ್ವ ವಿಕಾಸ ಮತ್ತು ಯಶಸ್ಸಿನ ಕಥೆಗಳು ಎಂಬ ಐದು ಭಾಗಗಳಲ್ಲಿ, 114 ಅಧ್ಯಾಯಗಳಲ್ಲಿ ಸಂಕಲಿತವಾಗಿರುವ ಕೃತಿ ‘ಗೆದ್ದೇ ಗೆಲ್ಲುವೆವು’.  ಎಸ್.ಡಿ.ಎ., ಎಫ್.ಡಿ.ಎ., ಕೆ.ಇ.ಎಸ್., ಕೆ.ಎ.ಎಸ್., ಐ.ಎ.ಎಸ್. ಪರೀಕ್ಷೆಗಳಿಗೆ ತಯಾರಾಗುತ್ತಿರುವವರಿಗೆ ಈ ಕೃತಿ ಬಹಳ ಉಪಯುಕ್ತ.

About the Author

ಬೇದ್ರೆ ಮಂಜುನಾಥ
(10 June 1967)

ಲೇಖಕ, ಚಿಂತಕ, ಅಂಕಣಕಾರರಾದ ಬೇದ್ರೆ ಮಂಜುನಾಥ್ ಮೂಲತಃ ಶಿವಮೊಗ್ಗದವರು, 10-06-1967ರಲ್ಲಿ ಕಡುಬಡತನದ ಕುಟುಂಬದಲ್ಲಿ ಹುಟ್ಟಿದ ಮಂಜುನಾಥ್ ಸದಾ ಕ್ರಿಯಾಶೀಲ ವ್ಯಕ್ತಿ. ತಮ್ಮ ಸ್ವ-ಪರಿಶ್ರಮದಿಂದಲೇ ಬೆಳೆದಿರುವ ಅವರು ಈ ವರೆಗೂ 50ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ರಚಿಸಿದ್ದಾರೆ. ಸದ್ಯ ಆಕಾಶವಾಣಿ ಮೈಸೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜುನಾಥ್ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ ಓದುವಾಗಲೇ ಇಂಗ್ಲೀಷ್ ಗ್ರಾಮರ್ ಬಗ್ಗೆ ಪುಸ್ತಕ ಪ್ರಕಟಿಸಿದ್ದರು. ಈ ಪುಸ್ತಕ 10 ಬಾರಿ ಮರು ಮುದ್ರಣಕಂಡು ದಾಖಲೆ ಸೃಷ್ಟಿಸಿತ್ತು. ಆನಂತರ ಕುವೆಂಪು ವಿವಿಯಲ್ಲಿ ಇತಿಹಾಸದಲ್ಲಿ ಪ್ರಥಮರಾಗಿ ಪದವಿ ಗಳಿಸಿದ್ದರು. ಇಂಗ್ಲೀಷಿನಲ್ಲಿ ಎಂ.ಎ.ಮಾಡಲು ಬಯಸಿದ್ದ ಅವರು ಮೈಸೂರಿಗೆ ತೆರಳಿದರು. ಎಂ.ಎ ...

READ MORE

Related Books