ಗಿರಿಸಂಪದ

Author : ಚಂದ್ರಕಾಂತ ಕರದಳ್ಳಿ

Pages 80

₹ 50.00
Year of Publication: 2013
Published by: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು
Address: ಯಾದಗಿರಿ

Synopsys

'ಗಿರಿಸಂಪದ'ವು ಯಾದಗಿರಿ ಜಿಲ್ಲೆಯ ಸಾಹಿತ್ಯ, ಇತಿಹಾಸ, ಶಾಸನ, ದಾರ್ಶನಿಕತೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪ, ಸಂಸ್ಕೃತಿ, ಪರಂಪರೆಗೆ ಸಂಬಂಧಿಸಿದ ಅನೇಕ ಅಧ್ಯಯನಪೂರ್ಣ ಲೇಖನಗಳನ್ನು ಒಳಗೊಂಡ ಕೃತಿ. ಇದು ಯುವ ಸಂಶೋಧಕರಿಗೆ, ಆಸಕ್ತ ಜ್ಞಾನದಾಹಿಗಳಿಗೆ, ನಾಡಿನ ಇನ್ನಿತರ ಸಹೃದಯರಿಗೆ ಉಪಯುಕ್ತವಾಗಬಹುದಾದ ಉತ್ತಮ ಆಕರವಾಗಿ ರೂಪು ತಳೆದಿದೆ. 

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books