ಗೌರಿ

Author : ಅ.ನ.ಕೃ (ಅ.ನ. ಕೃಷ್ಣರಾಯ)

Pages 196

₹ 133.00

Buy Now


Year of Publication: 2019
Published by: ಹೇಮಂತ ಸಾಹಿತ್ಯ
Address: ನಂ.972, ಸಿ, 4ನೇ ಇ ಬ್ಲಾಕ್, 10ನೇ ಮುಖ್ಯರಸ್ತೆ, ರಾಜಾಜಿನಗರ, ಬೆಂಗಳೂರು-560060

Synopsys

ಗೌರಿ-ಅ.ನ.ಕೃಷ್ಣರಾಯರು (ಅ.ನ.ಕೃ) ಬರೆದ ಸಾಮಾಜಿಕ ಕಾದಂಬರಿ. ಸ್ತ್ರೀಯರ ಸಮಸ್ಯೆಗಳು, ಅವರು ಎದುರಿಸಬೇಕಾದ ಕೌಟುಂಬಿಕ ದೌರ್ಜನ್ಯ, ಅವಳಿಗಿರಬೇಕಾದ ಮಾನಸಿಕ ಸ್ಥೈರ್ಯ , ಇವುಗಳ ಮೂಲಕವೇ ಹೆಣ್ಣು ತನ್ನ ಅಸ್ತಿತ್ವ ಕಾಯ್ದುಕೊಳ್ಳುವುದು ಅನಿವಾರ್ಯ. ತಪ್ಪಿದರೆ, ಶೋಷಣೆಯ ಬಲಿಪಶುವಾಗುವುದು ಖಚಿತ ಎಂಬ ಸಂದೇಶದ ಕಾದಂಬರಿಯು ತನ್ನ ನಿರೂಪಣಾ ಶೈಲಿಯಿಂದ ಗಮನ ಸೆಳೆಯುತ್ತದೆ.

About the Author

ಅ.ನ.ಕೃ (ಅ.ನ. ಕೃಷ್ಣರಾಯ)
(09 May 1908 - 04 July 1971)

‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಹೆಸರಾಂತ ಕಾದಂಬರಿಕಾರರು. ‘ಕಾದಂಬರಿ ಸಾರ್ವಭೌಮ’ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರು. ಪ್ರಗತಿಶೀಲ ಸಾಹಿತ್ಯದ ಪ್ರಮುಖ ಲೇಖಕರು. ತಂದೆ ನರಸಿಂಗರಾವ್, ತಾಯಿ ಅನ್ನಪೂರ್ಣಮ್ಮ. 1908ರ ಮೇ 9ರಂದು ಜನಿಸಿದ ಅವರುಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣವನ್ನು ಕೋಲಾರದಲ್ಲಿ ಮುಗಿಸಿದರು. ಬೆಂಗಳೂರಿನಲ್ಲಿ ಪ್ರೌಢಶಾಲಾ ಶಿಕ್ಷಣವನ್ನು ದೇಶೀಯ ವಿದ್ಯಾಶಾಲೆಯಲ್ಲಿ ಪಡೆದರು. ಮೆಟ್ರಿಕ್ ಓದುತ್ತಿದ್ದಾಗ ಶಾಂತಿನಿಕೇತನಕ್ಕೆ ಹೋಗಿ ಬಂದರು. ಬರಹ ಮಾಡಿಯೇ ಬದುಕಿದವರು ಅನಕೃ. ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಕಥಾಂಜಲಿ, ಬಾಂಬೆ ಕ್ರಾನಿಕಲ್, ವಿಶ್ವವಾಣಿ ಪತ್ರಿಕೆಗಳನ್ನು ...

READ MORE

Related Books