ಗ್ರಾಫಿಕ್ ಕಲೆ

Author : ರವಿಕುಮಾರ ಕಾಶಿ

Pages 108

₹ 5.00
Year of Publication: 1996
Published by: ಕರ್ನಾಟಕ ಲಲಿತಕಲಾ ಅಕಾಡೆಮಿ
Address: ನೃಪತುಂಗ ರಸ್ತೆ, ಕನ್ನಡಭವನ, ಬೆಂಗಳೂರು- 560002

Synopsys

‘ಗ್ರಾಫಿಕ್ ಕಲೆ’ ಕರ್ನಾಟಕ ಲಲಿತಕಲಾ ಅಕಾಡೆಮಿ ಜನಪ್ರಿಯ ಕಲಾಮಾಲಿಕೆಯಲ್ಲಿ ಪ್ರಕಟವಾದ ಕೃತಿ ಗ್ರಾಫಿಕ್ ಕಲೆ. ಕಲಾವಿದ, ಲೇಖಕ ರವಿಕುಮಾರ್ ಕಾಶಿ ಅವರು ರಚಿಸಿದ್ದಾರೆ. ಇಂದು ಕಲೆ ಹಾಗೂ ಜನಸಾಮಾನ್ಯರ ನಡುವೆ ಭಾರಿ ಅಂತರವಿದೆ. ಇಂದಿನ ಸಮಕಾಲೀನ ಕಲೆಯು ಜನಸಾಮಾನ್ಯರಿಗೆ ಅರ್ಥವಾಗದಿರುವುದೇ ಇದಕ್ಕೆ ಕಾರಣ ಎಂದು ಹಲವರ ಅಭಿಪ್ರಾಯ. ದೃಶ್ಯ ಕಲೆಗಳನ್ನು ಆಸ್ವಾದಿಸುವ ದೃಷ್ಟಿಯಿಂದ ನಮ್ಮ ಸಾಮಾನ್ಯ ಶಿಕ್ಷಣದಲ್ಲೂ ಗಂಭೀರ ಪ್ರಯತ್ನಗಳು ನಡೆಯುತ್ತಿಲ್ಲ. ಅಂತೆಯೇ ಈ ಕೊರತೆಗಳನ್ನು ಸ್ವಲ್ಪವಾದರೂ ತುಂಬುವುದು ಈ ಜನಪ್ರಿಯ ಕಲಾಮಾಲಿಕೆಯ ಆಶಯ. ಹೀಗೆ ಸಾಮಾನ್ಯರಿಗೆ ದೃಶ್ಯಕಲೆಗಳ ಪ್ರಾಥಮಿಕ ಜ್ಞಾನ ಒದಗಿಸುವ ದೃಷ್ಟಿಯಿಂದಲೇ ಈ ಕೃತಿಯನ್ನು ರಚಿಸಲಾಗಿದೆ. ಇದರಲ್ಲಿ ದೃಶ್ಯಕಲೆಯ ತಾತ್ವಿಕ ಅಂಶಗಳು, ಮಾಧ್ಯಮಗಳು, ತಂತ್ರಗಳು, ಇತಿಹಾಸ, ಆಧುನಿಕ ಕಲಾ ಪಂಥಗಳು ಇತ್ಯಾದಿ ವಿಷಯಗಳನ್ನು ಒಳಗೊಂಡಿದೆ.

About the Author

ರವಿಕುಮಾರ ಕಾಶಿ

ಕಲಾವಿದ ಹವ್ಯಾಸಿ ಬರಹಗಾರ ರವಿಕುಮಾರ ಕಾಶಿ ಅವರು ಜನಿಸಿದ್ದು ಬೆಂಗಳೂರಿನಲ್ಲಿ. ಬೆಂಗಳೂರಿನ ಕಾಲೇಜ್‌ ಆಫ್‌ ಫೈನ್‌ ಆರ್ಟ್‌‌ನಿಂದ ಪದವಿ ಹಾಗೂ ಬರೋಡಾದ ಫೈನ್‌ ಆರ್ಟ್ಸ್‌ ಫ್ಯಾಕಲ್ಟಿ ಕಾಲೇಜಿನಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಚಿತ್ರ, ಶಿಲ್ಪ, ಛಾಯಾಗ್ರಹಣ ಮತ್ತು ಇನ್‌ಸ್ಟಾಲೇಷನ್‌ ಕ್ಷೇತ್ರದಲ್ಲಿ ಕಲಾಕೃತಿ ರಚಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಜೊತೆಜೊತೆಗೆ ದೃಶ್ಯಸಂಸ್ಕೃತಿಯ ಬಗ್ಗೆ ಉಪನ್ಯಾಸ ನೀಡುತ್ತಾರೆ. ಇವರ ಕಣ್ನೆಲೆ ಪುಸ್ತಕಕ್ಕೆ ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯೂ ಲಭಿಸಿದೆ. ವಿವಿಧ ದೇಶಗಳಲ್ಲಿ ದೃಶ್ಯಸಂಸ್ಕೃತಿಯ ಬಗ್ಗೆ ಉಪನ್ಯಾಸ ನೀಡಿದ್ದಾರೆ. ಕನ್ನಡ ಮಾತ್ರವಲ್ಲದೆ ಇಂಗ್ಲಿಷ್‌ ಭಾಷೆಯಲ್ಲಿಯೂ ಕೃತಿ ರಚಿಸಿದ್ದಾರೆ. ಇವರ ಸೇನಾ ಪರ್ವ ಕೃತಿಯು ಕನ್ನಡ ...

READ MORE