ಗುರಿ (ಪುಸ್ತಕ)

Author : ಶಿವಾನಂದ ಬೇಕಲ್

Pages 302

₹ 299.00




Year of Publication: 2014
Published by: ಮಂಜುಳ್ ಪಬ್ಲಿಷಿಂಗ್ ಹೌಸ್
Address: ಭೂಪಾಲ, (ಮಧ್ಯಪ್ರದೇಶ ರಾಜ್ಯ)

Synopsys

ಬ್ರಿಯಾನ್ ಟ್ರೇಸಿ ಅವರು ಆಂಗ್ಲ ಕೃತಿ-ಗೋಲ್ಸ್ ಅನ್ನು ಲೇಖಕ ಶಿವಾನಂದ ಬೇಕಲ್ ಅವರು ‘ಗುರಿ’ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದಾರೆ. ಜೀವನದಲ್ಲಿ ಯಶಸ್ಸು ಹೇಗೆ ಸಾಧಿಸಬೇಕು. ಆ ಗುರಿ ಸಾಧನೆಗೆ ಅನುಸರಿಸಬೇಕಾದ ಸೂತ್ರಗಳು ಯಾವವು? ನಮ್ಮ ಬಯಕೆಗಳನ್ನು ಹೇಗೆ ಸಾಕಾರಗೊಳಿಸಿಕೊಳ್ಳಬೇಕು ಎಂಬುದರ ಬಗ್ಗೆ ಪ್ರೇರಣಾತ್ಮಕವಾಗಿ ಬರಹಗಳನ್ನು ಈ ಕೃತಿ ಒಳಗೊಂಡಿದೆ.

About the Author

ಶಿವಾನಂದ ಬೇಕಲ್
(21 February 1951)

ಡಾ. ಶಿವಾನಂದ ಬೇಕಲ್ ಅವರು ಹುಟ್ಟಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಐತಿಹಾಸಿಕ ಸ್ಥಳ ಬೇಕಲ್ ನಲ್ಲಿ. ತಂದೆ- ಬೇಕಲ್  ಸಾಂತನಾಯಕರು, ತಾಯಿ- ಲಲಿತಾಬಾಯಿ. ಪ್ರಾಥಮಿಕದಿಂದ ಹೈಸ್ಕೂಲುವರೆಗೆ ವಿದ್ಯಾಭ್ಯಾಸ ನಡೆದದ್ದು ಬೇಕಲ್‌ನಲ್ಲಿ . ಕಾಸರಗೋಡಿನಲ್ಲಿ ಬಿ.ಎಸ್ಸಿ, ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಡ್, ಕರ್ನಾಟಕ ವಿಶ್ವ ವಿದ್ಯಾಲಯದಿಂದ ಎಂ.ಎ. ಮತ್ತು ಗುಲಬರ್ಗಾ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪಡೆದರು. 16ನೇ ವಯಸ್ಸಿನಲ್ಲಿ ಬರೆದ ‘ಕೇದಗೆಯ ಹಾವು’ ಮೊದಲ ಕಥೆಗೆ 1968ರಲ್ಲಿ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಬಹುಮಾನ ಗಳಿಸಿತು. ಇವರ ಲೇಖನ ಕೃಷಿ ಮಂಗಳೂರಿನ ನವಭಾರತ, ಕಿನ್ನಗೋಳಿಯ ಯುಗಪುರುಷ ನಂತರ  ಸುಧಾ, ತರಂಗ, ಪ್ರಜಾವಾಣಿ, ...

READ MORE

Related Books