ಹಾಡು ಹಸೆ

Author : ಕೆ.ಎಸ್. ನರಸಿಂಹಸ್ವಾಮಿ

Pages 164

₹ 86.00

Buy Now


Year of Publication: 2012
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100/26

Synopsys

ಐರಾವತ, ದೀಪದ ಮಲ್ಲಿ, ಉಂಗುರ, ಇರುವಂತಿಗೆ, ಶಿಲಾಲತೆ, ತೆರೆದ ಬಾಗಿಲು, ನವಪಲ್ಲವ, ದುಂಡು ಮಲ್ಲಿಗೆ, ಸಂಜೆ ಹಾಡು, ಕೈಮರದ ನೆಳಲಲ್ಲಿ, ಎದೆ ತುಂಬ ನಕ್ಷತ್ರ, ಮೌನದಲಿ ಮಾತ ಹುಡುಕುತ್ತ, ದೀಪ ಸಾಲಿನ ನಡುವೆ-ಇವು ಕೆ.ಎಸ್. ನರಸಿಂಹಸ್ವಾಮಿ ಅವರ ಕವನ ಸಂಕಲನಗಳು. ಆ ಪೈಕಿ ಹಾಡು ಹಸೆ ಎಂಬುದೂ ಒಂದು ಕವನ ಸಂಕಲನ. ಇವರ 16 ಸಂಕಲನದ ಸುಮಾರು 75 ಕವಿತೆಗಳು ಇಲ್ಲಿ ಸಂಕಲನಗೊಂಡಿವೆ. ಇಲ್ಲಿಯ ಕವಿತೆಗಳ ಹಿನ್ನೆಲೆಯಲ್ಲಿ ಕವಿಯು ಇತರೆ ಕನ್ನಡದ ಕವಿಗಳಿಗಿಂತ ಹೇಗೆ ಭಿನ್ನವಾಗಿದ್ದಾರೆ ಎಂಬುದರ ತೌಲನಿಕ ಅಧ್ಯಯನಕ್ಕಾಗಿ ಈ ಕೃತಿ ಉತ್ತಮ ಆಕರ ಗ್ರಂಥವಾಗುತ್ತದೆ.

About the Author

ಕೆ.ಎಸ್. ನರಸಿಂಹಸ್ವಾಮಿ
(26 January 1915 - 28 December 2003)

ಮೈಸೂರ ಮಲ್ಲಿಗೆಯ ಕವಿಯೆಂದು ಪ್ರಖ್ಯಾತರಾಗಿ ಮನೆಮಾತಾದ ಕೆ.ಎಸ್. ನರಸಿಂಹಸ್ವಾಮಿ ಅವರು (ಕಿಕ್ಕೇರಿ ಸುಬ್ಬರಾಯ ನರಸಿಂಹಸ್ವಾಮಿ) ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 1915ರ ಜನೆವರಿ 26ರಂದು ಜನಿಸಿದರು. ತಂದೆ ಸುಬ್ಬರಾಯ, ತಾಯಿ ನಾಗಮ್ಮ. ಮೈಸೂರಿನ ಮಹಾರಾಜ ಹೈಸ್ಕೂಲು, ಇಂಟರ್ ಮೀಡಿಯೇಟ್ ಕಾಲೇಜ್ ಮತ್ತು ಬೆಂಗಳೂರಿನ ಸೆಂಟ್ರಲ್ ಕಾಲೇಜುಗಳಲ್ಲಿ ಓದಿದ ಅವರು ಆರ್ಥಿಕ ತೊಂದರೆಗಳಿಂದ ಡಿಗ್ರಿ ವ್ಯಾಸಂಗವನ್ನು ಪೂರ್ಣ ಮಾಡಲಾಗಲಿಲ್ಲ. 22ನೇ ವಯಸ್ಸಿನಲ್ಲಿ ಗುಮಾಸ್ತೆ ಹುದ್ದೆಗೆ ಸೇರಿದ್ದರು. ಆ ವೇಳೆಗೆ ತಿಪಟೂರಿನ ವೆಂಕಮ್ಮನವರೊಂದಿಗೆ ವಿವಾಹವಾಗಿತ್ತು. ತಮ್ಮ ವೃತ್ತಿಜೀವನದ ಕಾಲದಲ್ಲಿ ಮೈಸೂರು, ನಂಜನಗೂಡು, ಬೆಂಗಳೂರುಗಳಲ್ಲಿ ಬೇರೆ ಬೇರೆ ಇಲಾಖೆಗಳಲ್ಲಿ ಸರಕಾರಿ ನೌಕರರಾಗಿ ದುಡಿದು ...

READ MORE

Related Books