ಹಕ್ಕಿ ಮತ್ತು ರೆಕ್ಕೆ

Author : ಎಚ್. ಎಸ್. ವೆಂಕಟೇಶಮೂರ್ತಿ

Pages 161

₹ 140.00




Year of Publication: 2021
Published by: ಸಪ್ನ ಬುಕ್ ಹೌಸ್ ಪ್ರೈ.ಲಿ
Address: ಆರ್.ಒ #11, 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು-9
Phone: 08040114455

Synopsys

ಕವಿ, ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಅವರ ಕವನಗಳ ಸಂಕಲನ ‘ಹಕ್ಕಿ ಮತ್ತು ರೆಕ್ಕೆ’. ಬೆಸ್ಟ್ ಆಫ್ ಎಚ್ ಎಸ್ ವಿ ಎಂಬ ಶೀರ್ಷಿಕೆಯನ್ನು ಈ ಕೃತಿ ಹೊಂದಿದೆ. 66ನೇ ಕನ್ನಡ ರಾಜ್ಯೋತ್ಸವದ ವೇಳೆಯಲ್ಲಿ ಸಪ್ನ ಬುಕ್ ಹೌಸ್ ಪ್ರಕಾಶನದ ಮೂಲಕ ತೆರೆ ಕಂಡ ಕೃತಿಯಿದೆ. ಬೆನ್ನುಡಿಯ ಮಾತುಗಳನ್ನು ಖುದ್ದು ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬರೆದಿದ್ದಾರೆ.

About the Author

ಎಚ್. ಎಸ್. ವೆಂಕಟೇಶಮೂರ್ತಿ
(23 June 1944)

ವೆಂಕಟೇಶ ಮೂರ್ತಿ ಅವರು ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಎಂಬ ಸಣ್ಣ ಹಳ್ಳಿಯಲ್ಲಿ ಮಧ್ಯಮವರ್ಗದ ಕುಟುಂಬವೊಂದರಲ್ಲಿ 23-06-1944ರಲ್ಲಿ ಜನಿಸಿದರು. ಮೂವತ್ತು ವರ್ಷಗಳ ಕಾಲ ಗ್ರಾಮ್ಯಜೀವನ ನಡೆಸಿ ನಂತರ ಬೆಂಗಳೂರಿನ ಸೇಂಟ್ ಜೋಸೆಫ್ ವಾಣಿಜ್ಯ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ 1973ರಲ್ಲಿ ನೇಮಕಗೊಂಡರು. 2000 ರಲ್ಲಿ ನಿವೃತ್ತರಾದ ಅವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಾರಂಭದಲ್ಲಿ ಯಕ್ಷಗಾನ, ಬಯಲಾಟದಂಥ ರಂಗಪ್ರದರ್ಶನಗಳು ಇವರ ಮೇಲೆ ಗಾಢ ಪ್ರಭಾವ ಬೀರಿದವು. ಬಾಲ್ಯದಲ್ಲೇ ಕುಮಾರವ್ಯಾಸ, ಪುರಂದರ, ಲಕ್ಷ್ಮೀಶ ಮೊದಲಾದವರ ಕೃತಿಗಳ ನಿಕಟ ಸಂಪರ್ಕ ದೊರೆಯಿತು. ಮುಂದೆ ಕನ್ನಡ, ಸಂಸ್ಕೃತ, ಇಂಗ್ಲಿಷ್ ಸಾಹಿತ್ಯ ಪರಂಪರೆಯೊಂದಿಗೆ ನಡೆಸಲಾದ ...

READ MORE

Related Books