ಹರಿಚಿತ್ತ ಸತ್ಯ- ವಸುಧೇಂದ್ರ ಅವರ ಮೊದಲ ಕಾದಂಬರಿ. ಅತ್ಯಂತ ಸಂಯಮದಿಂದ ಕಾದಂಬರಿಯನ್ನು ಹೆಣೆದಿದ್ದು ಅವರ ಪ್ರೌಢಿಮೆಗೆ ಕನ್ನಡಿ ಹಿಡಿಯುತ್ತದೆ. ಸನ್ನಿವೇಶಗಳ ಜೋಡಣೆ, ಪಾತ್ರಗಳ ಸಂಭಾಷಣೆ, ನಿರೂಪಣೆ ಶೈಲಿ ಓದುಗರ ಗಮನ ಸೆಳೆಯುತ್ತದೆ. ಕಟ್ಟರ ಸಮಾಜ ಹಾಗೂ ಮುಕ್ತ ಸಮಾಜದ ಮಧ್ಯೆ ಇರುವ ವಿದ್ಯಮಾನಗಳು, ವೈಚಾರಿಕ ಪ್ರವಾಹ ಇಲ್ಲಿಯ ಪ್ರಮುಖ ವಸ್ತು. ಆದರೂ, ವಿಧಿಯ ಪಾತ್ರವನ್ನು ತಳ್ಳಿ ಹಾಕದೇ ಇದ್ದರಿಂದ ಅವರು ಹರಿಚಿತ್ತ ಸತ್ಯ ಎಂದೇ ಕಾದಂಬರಿಗೆ ಹಸರು ಇಟ್ಟಿದ್ದು ಸೂಕ್ತವೆನಿಸಿದೆ.
ವಸುಧೇಂದ್ರ ಅವರು ಕನ್ನಡದ ಪ್ರಸಿದ್ಧ ಬರಹಗಾರರು ಹಾಗೂ ಪುಸ್ತಕ ಪ್ರಕಾಶಕರು. ಮುಖ್ಯವಾಗಿ ಕತೆ, ಕಾದಂಬರಿ, ಲಲಿತ ಪ್ರಬಂಧಗಳು ಇವರ ಬರವಣಿಗೆಯ ಪ್ರಕಾರಗಳು.ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 1969ರಲ್ಲಿ ಜನಿಸಿದ ವಸುಧೇಂದ್ರ ಅಲ್ಲಿಯೇ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಆನಂತರ ಸುರತ್ಕಲ್ ನಿಂದ ಇಂಜಿನಿಯರಿಂಗ್ ಪದವಿ ಮತ್ತು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಯ್ ನಿಂದ ಎಂ.ಇ. ಪದವಿ ಪಡೆದಿದ್ದಾರೆ. ಸುಮಾರು 20 ವರ್ಷಗಳ ಕಾಲ ಸಾಫ್ಟ್ ವೇರ್ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ವಾಸವಿದ್ದು, ಸದ್ಯಕ್ಕೆ ಖಾಸಗಿಯಾಗಿ ಹಲವಾರು ಕೆಲಸ ಮತ್ತು ಬರವಣಿಗೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮನೀಷೆ, ಯುಗಾದಿ, ಚೇಳು, ...
READ MORE