ಆರೋಗ್ಯಕ್ಕೆ ಸಂಬಂಧಿಸಿ ವೈವಿಧ್ಯಮಯ ಕೃತಿಗಳನ್ನು ರಚಿಸಿರುವ ಲೇಖಕಿ ಡಾ. ಎಚ್.ಎಸ್. ಅನುಪಮಾ ಅವರ ಮೊದಲ ಕಥಾ ಸಂಕಲನ-ಹೂವರಳಿದ್ದಕ್ಕೆ ಯಾಕೆ ಸಾಕ್ಷಿ. ಸಹಜತೆ-ಸ್ವಾಭಾವಿಕತೆಯನ್ನು ಪ್ರಶ್ನಿಸುವುದು ನಮ್ಮದೇ ಅಜ್ಞಾನ ಪ್ರದರ್ಶನ ಎಂಬ ಪ್ರಖರ ವಿಚಾರಗಳೊಂದಿಗೆ ಮಂಡಿತವಾದ ಇಲ್ಲಿಯ ಕಥೆಗಳು ಪಾರದರ್ಶಕತೆ ಹಾಗೂ ಪ್ರಾಮಾಣಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತವೆ. ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಕಾಲ್ಪನಿಕ ಹಾಗೂ ವಾಸ್ತವತೆಗಳ ಸಮತೋಲನದ ಎಚ್ಚರಿಕೆ ಇಂತಹ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.
ಲೇಖಕಿ, ಕವಯತ್ರಿ ಎಚ್.ಎಸ್.ಅನುಪಮಾ ಅವರು ವೃತ್ತಿಯಲ್ಲಿ ವೈದ್ಯೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕವಲಕ್ಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ‘ಹೂ ಅರಳಿದ್ದಕ್ಕೆ ಯಾಕೆ ಸಾಕ್ಷಿ’. ಜೀವಕೋಶ, ಮಹಿಳಾ ಆರೋಗ್ಯ, ಅಸಮಾನ ಭಾರತ, ಮಹಿಳೆ: ದಲಿತತ್ವ ಮತ್ತು ರಾಜಕೀಯ ಪ್ರಜ್ಞೆ, ಭೀಮಯಾನ, ಉರಿಯ ಪದವು(ನಾಮದೇವ ಢಸಾಳ್ ಅನುವಾದ). ಅಂಬೇಡ್ಕರ್ ಮತ್ತು ಕಾರ್ಟೂನ್ ವಿವಾದ, ಮೋಟರ್ ಸೈಕಲ್ ಡೈರಿ ಸೇರಿದಂತೆ ಹಲವು ಕೃತಿಗಳು ಪ್ರಕಟವಾಗಿವೆ. ದಲಿತ, ಮಹಿಳಾ ಮತ್ತು ಪ್ರಗತಿಪರ ಸಂಘಟನೆಗಳೊಡನೆ ಗುರುತಿಸಿಕೊಂಡಿರುವ ಅನುಪಮಾ ಲಡಾಯಿ ಪ್ರಕಾಶನದ ಕಾರ್ಯಗಳಲ್ಲೂ ಸಹಭಾಗಿಯಾಗಿದ್ದಾರೆ. ...
READ MORE