ಹೊತ್ತಗೆಗಳ ಹೊಸ್ತಿಲಲ್ಲಿ

Author : ಬಿ.ಎ. ವಿವೇಕ ರೈ

Pages 250

₹ 200.00




Year of Publication: 2021

Synopsys

ಲೇಖಕ, ಸಂಸ್ಕೃತಿ ಚಿಂತಕ ಬಿ.ಎ. ವಿವೇಕ್ ರೈ ಸಾಹಿತ್ಯಿಕ ಬರಹಗಳ ಸಂಗ್ರಹ ’ಹೊತ್ತಗೆಗಳ ಹೊಸ್ತಿಲಲ್ಲ’. ಈ ಕೃತಿಗೆ ಕವಿ ಎಚ್.ಎಸ್. ವೆಂಕಟೇಶ ಮೂರ್ತಿ ಅವರು ಬೆನ್ನುಡಿ ಬರೆದಿದ್ದಾರೆ. 66ನೆ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಂಡ ಕೃತಿಯಿದು.

About the Author

ಬಿ.ಎ. ವಿವೇಕ ರೈ
(08 December 1946)

ಡಾ. ಬಿ.ಎ.ವಿವೇಕ ರೈ ಸಂಸ್ಕೃತಿ ಚಿಂತಕರು. ಕನ್ನಡ-ತುಳು ಭಾಷೆಯ ಆಂತರಿಕ ಶಕ್ತಿ-ಸಂಪತ್ತನ್ನು ಸಂವರ್ಧಿಸಿದ ವಿದ್ವಾಂಸರು. ಅವರ ಹುಟ್ಟೂರು ಪುತ್ತೂರು ತಾಲೂಕಿನ 'ಪುಣಚಾ'. (ಜನನ: 1946ರ ಡಿಸೆಂಬರ್ 8ರಂದು), ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ, ಮತ್ತೂರಿನಲ್ಲಿ ಪಿಯುಸಿ, ಬಿಎಸ್ಸಿ ವ್ಯಾಸಂಗ, ಮೈಸೂರು ವಿಶ್ವವಿದ್ಯಾನಿಲಯದ ಮಂಗಳೂರು ಸ್ನಾತಕೋತ್ತರಕೇಂದ್ರ ದಲ್ಲಿ ಕನ್ನಡ ಎಂ.ಎ. ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಜೊತೆಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಡಾ.ಹಾ.ಮಾ.ನಾಯಕರ ಮಾರ್ಗದರ್ಶನದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದಿದ್ದಾರೆ.  ಕನ್ನಡ ಮತ್ತು ತುಳು ಭಾಷೆಯ ಬಗ್ಗೆ ಅಪಾರ ಒಲವು-ಪಾಂಡಿತ್ಯ ಉಳ್ಳವರು. ಭಾಷಾ ಅಧ್ಯಯನದ ಮಾದರಿಗಳನ್ನು ರೂಪಿಸಿದ ವಿದ್ವಾಂಸರು. ಸಂಶೋಧನೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ, ರೀಡರ್, ಪ್ರಾಧ್ಯಾಪಕ, ...

READ MORE

Related Books