ಜಾಗತೀಕರಣ ಸಂದರ್ಭದಲ್ಲಿ ಅಭಿವೃದ್ಧಿ ಮತ್ತು ಅಧಿಕಾರ ರಾಜಕಾರಣ

Author : ನಾ. ದಿವಾಕರ

Pages 68

₹ 50.00




Year of Publication: 2017
Published by: ಲಡಾಯಿ ಪ್ರಕಾಶನ
Address: 21, ಪ್ರಸಾದ್ ಹಾಸ್ಟೆಲ್, ಗದಗ- 582101
Phone: 9480286844

Synopsys

ಭಾರತದಲ್ಲಿ ರಾಜಕಾರಣ ಕಾರ್ಪೋರೇಟ್ ಉದ್ಯಮಿಗಳ ಹಿಡಿತದಲ್ಲಿದೆ. ಕಾರ್ಪೋರೇಟ್ ಉದ್ಯಮ ರಾಜಕಾರಣಿಗಳ ಹಿಡಿತದಲ್ಲಿದೆ. ಇದು ಕಾಂಗ್ರೆಸ್ ಅಥವಾ ಬಿಜೆಪಿ ಆಳ್ವಿಕೆಯ ಪ್ರಶ್ನೆಯಲ್ಲ. ಭಾರತದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಬಂಡವಾಳಶಾಹಿ ಪ್ರಭುತ್ವ ಮತ್ತು ಕಾರ್ಪೋರೇಟ್ ಆಳ್ವಿಕೆಯ ಪ್ರಶ್ನೆ, ಈ ಸಂದರ್ಭದಲ್ಲಿ ನರೇಂದ್ರ ಮೋದಿ ಸರ್ಕಾರದ ಡಿಜಿಟಲೀಕರಣ, ಅಮಾನ್ಯೀಕರಣ ಮತ್ತು ಖಾಸಗೀಕರಣದ ಭರಾಟೆ ಭಾರತದ ಶ್ರಮಜೀವಿಗಳ ಬದುಕನ್ನು ಮೂರಾಬಟ್ಟೆ ಮಾಡಿದೆ ಎನ್ನುವ ಲೇಖಕರು ’ಇದು ಮೋದಿ ಸರ್ಕಾರದ ಏಕಪಕ್ಷೀಯ ನಿರ್ಧಾರವೂ ಅಲ್ಲ, ಆಡಳಿತ ನೀತಿಯೂ ಅಲ್ಲ, ಇಂದಿರಾಗಾಂಧಿ ತುರ್ತುಪರಿಸ್ಥಿತಿಯ ನಂತರ ಮರಳಿ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಭಾರತದ ಅರ್ಥವ್ಯವಸ್ಥೆ ಜಾಗತೀಕರಣದ ಹಾದಿ ತುಳಿದಿರುವುದನ್ನು ಸಮಕಾಲೀನ ಇತಿಹಾಸದ ಅಧ್ಯಯನದಿಂದ ಅರಿಯಬಹುದು’ ಎಂದಿದ್ದಾರೆ.

ಅಮಾನ್ಯೀಕರಣ ಕೇವಲ ಡಿಜಿಟಲೀಕರಣದ ಸಾಧನವಲ್ಲ. ಭಾರತದ ಅರ್ಥವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾರ್ಪೋರೇಟ್ ಔದ್ಯಮಿಕ ಹಿತಾಸಕ್ತಿಗಳಿಗೆ ಸಮರ್ಪಿಸುವ ಬೃಹತ್ ಯೋಜನೆಯನ್ನು ನರೇಂದ್ರ ಮೋದಿ ಅನಾವರಣಗೊಳಿಸಿದ್ದಾರೆ. ನರಸಿಂಹರಾವ್, ಐ.ಕೆ ಗುಜ್ರಾಲ್, ದೇವೇಗೌಡ, ಅಟಲ್ ಬಿಹಾರಿ ವಾಜಪೇಯಿ ಸರ್ಕಾರಗಳು ಹಾಕಿರುವ ತಳಪಾಯದ ಮೇಲೆ ನರೇಂದ್ರ ಮೋದಿ ನವ ಉದಾರವಾದದ ಸೌಧವನ್ನು ನಿರ್ಮಿಸುತ್ತಿದ್ದಾರೆ. ಹಾಗಾಗಿಯೇ ಅಧಿಕಾರ ರಾಜಕಾರಣ ಮತ್ತು ಬಂಡವಾಳದ ಹಿತಾಸಕ್ತಿಯ ನಡುವೆ ಸಮನ್ವಯ ಸಾಧಿಸುವುದು ಸಾಧ್ಯವಾಗಿದೆ. ಈ ಸಮನ್ವಯ ಸಾಮಾಜಿಕ ಸೌಹಾರ್ದತೆಯನ್ನೂ ನಾಶಪಡಿಸುತ್ತಿದೆ ಎಂಬ ಅಭಿಪ್ರಾಯ ಲೇಖಕರದು.

About the Author

ನಾ. ದಿವಾಕರ

ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...

READ MORE

Related Books