ಜೈನಧರ್ಮದಲ್ಲಿ ಯಕ್ಷ-ಯಕ್ಷಿಯರು ಪ್ರೇರಣೆ ಮತ್ತು ಪರಿಕಲ್ಪನೆ

Author : ಎನ್. ಚಿನ್ನಸ್ವಾಮಿ ಸೋಸಲೆ

Pages 428

₹ 260.00




Year of Publication: 2015
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ-583276

Synopsys

ಉತ್ದತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಯಕ್ಷ-ಯಕ್ಷಿಯರಿಗೆ ಪ್ರತ್ಯೇಕ ಪೂಜಾ ಮಂದಿರಗಳು ಸಾಕಷ್ಟಿವೆ. ಕರ್ನಾಟಕದ ಜೈನ ಸಂಸ್ಕೃತಿಯಲ್ಲಿ ಯಕ್ಷ-ಯಕ್ಷಿಯರ ಪಾತ್ರ ಪ್ರಮುಖ. ಈ ಯಕ್ಷ-ಯಕ್ಷಿಯರು ಯಾವುದೇ ಜಾತಿಯನ್ನು ಪ್ರತಿನಿಧಿಸುವುದಿಲ್ಲ ಎಂಬುದು ಮುಖ್ಯ. ಕನ್ನಡ ವಿಶ್ವವಿದ್ಯಾಲಯದ ಅಭೇರಾಜ್ ಬಲ್ದೋಟ ಜೈನ ಸಂಸ್ಕೃತಿ ಅಧ್ಯಯನ ಪೀಠವು ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಮಂಡಿತವಾದ ಸಂಶೋಧನಾ ಪ್ರಬಂಧಗಳನ್ನು ಕೃತಿಯಲ್ಲಿ ಪ್ರಕಟಿಸಲಾಗಿದೆ. ಈ ಕೃತಿಯು ಯಕ್ಷ-ಯಕ್ಷಿಯರ ಸಾಂಸ್ಕೃತಿಕ ಅಧ್ಯಯನಕ್ಕೆ ಮಹತ್ವದ ಒಳನೋಟ ನೀಡುತ್ತದೆ.

About the Author

ಎನ್. ಚಿನ್ನಸ್ವಾಮಿ ಸೋಸಲೆ
(20 May 1968)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು  ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು.  ನಮ್ಮ ಗ್ರಾಮಗಳು ಅಂದು ಇಂದು,  ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...

READ MORE

Related Books