ಜತೆಗಿರುವನು ಚಂದಿರ

Author : ಜಯಂತ ಕಾಯ್ಕಿಣಿ

Pages 86

₹ 40.00




Year of Publication: 2016
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661 7100 :

Synopsys

ಖ್ಯಾತ ಕವಿ ಹಾಗೂ ಕಥೆಗಾರ ಜಯಂತ ಕಾಯ್ಕಿಣಿ ಅವರು ಬರೆದ ನಾಟಕ ಕೃತಿ-ಜತೆಗಿರುವನು ಚಂದಿರ. ಬೇಕರಿ ಕೆಲಸ ಮಾಡುತ್ತಾ ಪತ್ನಿ ಹಾಗೂ ಮೂವರು ಪುತ್ರಿಯರನ್ನು ಸಲಹುತ್ತಿರುವ ಬಡೆಮಿಯಾ ಎಂಬ ವ್ಯಕ್ತಿಯ ಕೌಟುಂಬಿಕ ಚಿತ್ರಣದ ಸುತ್ತ ಹೆಣೆದ ಕಥೆ ಇದು. ಪರಿಣಾಮಕಾರಿಯಾದ ಸಂಭಾಷಣೆ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಯು ಕಲಾತ್ಮಕ ಪ್ರದರ್ಶನದ ಹಿನ್ನೆಲೆಯಲ್ಲಿ ಪ್ರೇಕ್ಷಕರ ಗಮನ ಸೆಳೆಯುತ್ತದೆ.

About the Author

ಜಯಂತ ಕಾಯ್ಕಿಣಿ
(24 January 1955)

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ.  ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು.  ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...

READ MORE

Related Books