ಜಯಂತ ಕಾಯ್ಕಿಣಿ ಅವರ ಆಯ್ದ ಕಥೆಗಳು

Author : ಜಯಂತ ಕಾಯ್ಕಿಣಿ

Pages 108

₹ 75.00




Year of Publication: 2009
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

ಪ್ರಮುಖ ಕವಿ-ಕತೆಗಾರ ಜಯಂತ ಕಾಯ್ಕಿಣಿ ಅವರ ಆಯ್ದ ಕತೆಗಳನ್ನು ಈ ಸಂಕಲನ ಒಳಗೊಂಡಿದೆ. ಆಧುನಿಕ ಸಂವೇದನೆ ಹಾಗೂ ನಗರ ಬದುಕುಗಳನ್ನು ತಮ್ಮ ಕತೆಗಳಲ್ಲಿ ಸೊಗಸಾಗಿ ಕಟ್ಟಿಕೊಡಬಲ್ಲ ಜಯಂತ ಅವರ ಕತೆಗಳು ಓದುಗರ ಮನ್ನಣೆಗೆ ಪಾತ್ರವಾಗಿವೆ. ಅವರ ಪ್ರಾತಿನಿಧಿಕ ಕತೆಗಳು ಈ ಸಂಕಲನದಲ್ಲಿವೆ.

About the Author

ಜಯಂತ ಕಾಯ್ಕಿಣಿ
(24 January 1955)

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಜನಿಸಿದ ಜಯಂತ ಅವರ ತಂದೆ ಗೌರೀಶ ಕಾಯ್ಕಿಣಿ ಹೆಸರಾಂತ ವಿಚಾರವಾದಿ ಲೇಖಕ.  ಆಧುನಿಕ ಬದುಕಿನ ಆತಂಕಗಳನ್ನು ಕತೆಯಾಗಿಸುವ ಜಯಂತ ಕಾಯ್ಕಿಣಿ ಅವರು ಕನ್ನಡದ ಪ್ರಮುಖ ಕತೆಗಾರರಲ್ಲಿ ಒಬ್ಬರು.  ’ಕತೆಗಾರ’ ಎಂಬ ವಿಶೇಷಣ ಇದೆಯಾದರೂ ಅವರೊಬ್ಬ ಪ್ರಮುಖ ಕವಿ ಕೂಡ ಹೌದು. ಪ್ರಬಂಧ, ಅಂಕಣ ಬರಹ, ಚಲನಚಿತ್ರ ಸಂಭಾಷಣೆ ಮತ್ತು ಗೀತರಚನೆ ಹೀಗೆ ಹಲವು ಪ್ರಕಾರಗಳಲ್ಲಿ ಹೆಜ್ಜೆಗುರುತು ಮೂಡಿಸಿದ್ದಾರೆ. ’ಭಾವನಾ’ ಮಾಸಿಕ ಪತ್ರಿಕೆಯ ಸಂಪಾದಕರಾಗಿದ್ದ ಜಯಂತ ಅವರು ಈಟಿವಿ ವಾಹಿನಿಗಾಗಿ ’ನಮಸ್ಕಾರ’, ಬೇಂದ್ರೆ, ಕುವೆಂಪು, ಕಾರಂತ ನಮನ ಸರಣಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ರಂಗದಿಂದೊಂದಿಷ್ಟು ದೂರ, ಕೋಟಿತೀರ್ಥ, ಶ್ರಾವಣ ಮಧ್ಯಾಹ್ನ, ...

READ MORE

Related Books