ಕೆ.ಪಿ. ಪೂರ್ಣಚಂದ್ರ ತೇಜಸ್ವಿ

Author : ಎಚ್.ಎಂ. ಮಹೇಶ್ವರಯ್ಯ

Pages 112

₹ 75.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001
Phone: 7353530805 / 080 - 20161913

Synopsys

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಮೂಲತಃ ಸಾಹಿತಿಯಾಗಿದ್ದರೂ, ವಿಜ್ಞಾನ ಮತ್ತು ಇತರ ಕೆಲವು ಸಾಹಿತ್ಯೇತರ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡ ವಿಶಿಷ್ಟ ಲೇಖಕರು. ಕನ್ನಡ ಕಥೆ-ಕಾದಂಬರಿಗಳ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನೇ ನೆಟ್ಟ ತೇಜಸ್ವಿ ಅವರು ವಿಶಿಷ್ಟ ಪ್ರವಾಸ ಕಥನ, ಬೇಟೆ ಸಾಹಿತ್ಯ ಹಾಗೂ ಅನುವಾದಿತ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಹಾದಿಯನ್ನು ನಿರ್ಮಿಸಿಕೊಂಡು ಹೊರಟವರು, ಯಶಸ್ಸನ್ನು ಪಡೆದವರು. ತೇಜಸ್ವಿಯವರು 1987ರಲ್ಲಿ ‘ಚಿದಂಬರ ರಹಸ್ಯ‘ ಕೃತಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಅವರನ್ನು ಅರಸಿ ಬಂದಿದೆ. 

ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಬದುಕು ಮತ್ತು ಸಾಧನೆಯನ್ನು ಪರಿಚಯುಸುವ ಈ ಕೃತಿಯ ಲೇಖಕರು ಎಚ್.ಎಂ. ಮಹೇಶ್ವರಯ್ಯ.

About the Author

ಎಚ್.ಎಂ. ಮಹೇಶ್ವರಯ್ಯ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಸಾಹಿತಿ ಮಹೇಶ್ವರಯ್ಯ ಎಚ್. ಎಂ ಅವರು ಅಂತರರಾಷ್ಟ್ರೀಯ ದ್ರಾವಿಡ ಭಾಷಾ ಶಾಸ್ತ್ರಸಂಸ್ಥೆಯ ಅಧ್ಯಕ್ಷರು ಆಗಿದ್ದಾರೆ. ಕನ್ನಡ ಭಾಷೆ, ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಇವರಿಗೆ ಎಂ. ಎಂ. ಕಲಬುರ್ಗಿ ರಾಷ್ಟ್ರೀಯ ಸಾಹಿತ್ಯ ಸಂಶೋಧನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪೂರ್ಣಚಂದ್ರತೇಜಸ್ವಿ ಇವರು ಬರೆದ ಪ್ರಮುಖ ಕೃತಿಯಾಗಿದೆ.  ...

READ MORE

Related Books