ಕಬ್ಬಿಣ ಯುಗ ಮತ್ತು ಧಾರ್ಮಿಕ ಕ್ರಾಂತಿ

Author : ನಾ. ದಿವಾಕರ

Pages 168

₹ 140.00
Published by: ಚಿಂತನ ಪುಸ್ತಕ ಬೆಂಗಳೂರು
Phone: 9902249150

Synopsys

ಇತಿಹಾಸಕಾರ ಕೃಷ್ಣ ಮೋಹನ್ ಶ್ರೀಮಾಲಿ ಬರೆದಿರುವ 'ಕಬ್ಬಿಣ ಯುಗ ಮತ್ತು ಧಾರ್ಮಿಕ ಕ್ರಾಂತಿ'  ಕೃತಿಯನ್ನು ನಾ. ದಿವಾಕರ ಕನ್ನಡಕ್ಕೆ ಅನುವಾದಿಸಿದ್ದಾರೆ. ಹಿಂದೂ ಧರ್ಮದ ಪುನರ್ ಸ್ಥಾಪನೆಗಾಗಿ ಕೆಲವು ಶಕ್ತಿಗಳು ಹಾತೊರೆಯುತ್ತಿರುವ ಈ ಸಂದರ್ಭದಲ್ಲಿ ಈ ಅಧ್ಯಯನ ಭಾರತೀಯ ಪ್ರಾಚೀನ ಸಮಾಜದ ಮೇಲೆ ಬೆಳಕು ಚೆಲ್ಲುತ್ತದೆ. ಮತ್ತು ಹುಸಿ ಧಾರ್ಮಿಕವಾಗಿ, ರಾಷ್ಟ್ರೀಯವಾದಿಗಳ ಪೊಳ್ಳುತನವನ್ನು ಬೆಳೆಯುತ್ತದೆ. ಇತಿಹಾಸದ ವಿವಿಧ ಕಾಲಘಟ್ಟಗಳ, ವಿವಿಧ ಮಜಲುಗಳನ್ನು ಗ್ರಹಿ ಸುವುದರೊಂದಿಗೆ, ಸಮಕಾಲೀನ ಸಂದರ್ಭದಲ್ಲಿನ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಗಳನ್ನು ಪುನರ್ ವ್ಯಾಖ್ಯಾನ ಮಾಡುವ ನಿಟ್ಟಿನಲ್ಲಿ ಈ ಕೃತಿ ಮಹತ್ವ ಪಡೆಯುತ್ತದೆ. ಕಬ್ಬಿಣದ ಆವಿಷ್ಕಾರ, ಅದರ ಬಳಕೆಯಿಂದ ಆದ ಆರ್ಥಿಕ ಸಾಮಾಜಿಕ ಬದಲಾವಣೆಗಳು, ಜಾತಿ ವ್ಯವಸ್ಥೆಯ ಬೆಳವಣಿಗೆ, ಪ್ರಭುತ್ವ ಮತ್ತು ಮಗಧ ಸಾಮ್ರಾಜ್ಯದ ಉದಯ, ಬೌದ್ಧ, ಜೈನ ಧರ್ಮಗಳ ಬೆಳವಣಿಗೆ ಮತ್ತು ಬೌದ್ಧಿಕ ಮಂಥನ ಮುಂತಾದ ಅಂಶಗಳನ್ನು ಒಳಗೊಂಡ ಕೃತಿ ಇದಾಗಿದೆ.

About the Author

ನಾ. ದಿವಾಕರ

ಚಿಂತಕ, ಲೇಖಕ ನಾ. ದಿವಾಕರ ಅವರು ಹುಟ್ಟಿದ ಊರು ಕೋಲಾರ ಜಿಲ್ಲೆಯ ಚಿಂತಾಮಣಿ. 1961ರಲ್ಲಿ ಜನಿಸಿದ ಅವರು ಬೆಳೆದದ್ದು ಅದೇ ಜಿಲ್ಲೆಯ ಬಂಗಾರಪೇಟೆಯಲ್ಲಿ. ಪೂರ್ಣ ವಿದ್ಯಾಭ್ಯಾಸ ಬಂಗಾರಪೇಟೆಯಲ್ಲಿ ಮುಗಿಸಿದ ಅವರು ಬಿಕಾಂ ವ್ಯಾಸಂಗವನ್ನು ಕೋಲಾರದ ಸರ್ಕಾರಿ ಕಾಲೇಜಿನಲ್ಲಿ ಪೂರ್ಣಗೊಳಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಗಾಯನ, ನಾಟಕಗಳಲ್ಲಿ ಆಸಕ್ತಿಯೊಂದಿದ್ದ ಅವರು, ಹಲವು ಗೀತ ಗಾಯನ ಸ್ಪರ್ಧೆ, ಪ್ರಬಂಧ ಸ್ಪರ್ಧೆಗಳಲ್ಲಿ ಭಾಗವಿಹಿಸಿದ್ದಾರೆ. ತುರ್ತುಪರಿಸ್ಥಿತಿಯ ಸಂದರ್ಭದ ನಂತರ ರಾಜಕೀಯದತ್ತ ಒಲವು ತೊರಿದ ದಿವಾಕರ್ ಕ್ರಮೇಣ ದಲಿತ ಚಳುವಳಿ ಮತ್ತು ಮಾರ್ಕ್ಸ್ ವಾದಿ ಅಧ್ಯಯನದತ್ತ ಒಲವು ಬೆಳೆಸಿಕೊಂಡರು. 1982ರಲ್ಲಿ ಪದವಿ ಮುಗಿಸಿ 1984ರಲ್ಲಿ ಕೆನರಾಬ್ಯಾಂಕ್ ...

READ MORE

Related Books