ಕಬೀರನಾದ ಕುಬೇರ ಕಾರ್ನಾಡ್ ಸದಾಶಿವ ರಾವ್

Author : ಅರವಿಂದ ಚೊಕ್ಕಾಡಿ

Pages 96

₹ 120.00




Year of Publication: 2023
Published by: ನವಕರ್ನಾಟಕ ಪ್ರಕಾಶನ
Address: 101, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಕುಮಾರ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 080 - 22161900 / 22161901 / 22161902

Synopsys

ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಾಣಿಸಿಕೊಂಡಿದ್ದ ವೈವಿಧ್ಯಗಳೆಲ್ಲವೂ ಕರಾವಳಿ ಕರ್ನಾಟಕದಲ್ಲಿಯೂ ಕಾಣಿಸಿಕೊಂಡಿದ್ದುವು. ಶ್ರೀಗಳಾದ ಎಂ, ಲೋಕಯ್ಯ ಶೆಟ್ಟರು ನೇತಾಜಿ ಸುಭಾಶ್ಚಂದ್ರ ಬೋಸರಿಂದ ಪ್ರಭಾವಿತರಾಗಿದ್ದರೆ, ಅತ್ತಾವರ ಎಲ್ಲಪ್ಪನವರು. ಆಜಾದ್ ಹಿಂದ್‌ ಬ್ಯಾಂಕ್ ಸ್ಥಾಪನೆ ಮಾಡುವುದರ ಜೊತೆಗೆ ನೇತಾಜಿಯವರ ಆಝಾದ್ ಹಿಂದ್ ಸರಕಾರದ ಸದಸ್ಯರೂ ಆಗಿದ್ದರು. ಕೆ. ಕೆ. ಶೆಟ್ಟಿ, ಕೆ. ಆರ್. ಆಚಾರ್, ವಿ. ಎಸ್. ಕುಡ್ಡ, ಕಡೆಂಗೋಡ್ಲು ಶಂಕರ ಭಟ್ಟ ಮೊದಲಾದವರು ಪತ್ರಿಕೋದ್ಯಮಕ್ಕಿಳಿದು ಬ್ರಿಟಿಷ್ ಪ್ರಭುತ್ವದ ವಿರುದ್ಧ ಜನರನ್ನು ಸಂಘಟಿಸುತ್ತಿದ್ದರು. ಬಿ. ವಿ. ಕಕ್ಕಿಲ್ಲಾಯ, ಕೆ. ಆರ್. ಕಾರಂತ ಮೊದಲಾದವರು ರಾಷ್ಟ್ರೀಯ ಹೋರಾಟದ ಜೊತೆಗೆ ಕರ್ನಾಟಕ ಏಕೀಕರಣದ ಕೆಲಸಗಳನ್ನು ಮಾಡುತ್ತಾ, ಅವೆರಡರ ನಡುವೆ ಸಂಘರ್ಷ ಏರ್ಪಡದ ಹಾಗೆ ಚಳುವಳಿಗಳನ್ನು ರೂಪಿಸುವ ಹೊಣೆ ಹೊತ್ತಿದ್ದರು. ಶ್ರೀ ಅರವಿಂದ ಚೊಕ್ಕಾಡಿಯವರು ಪ್ರಸ್ತುತ ಪುಸ್ತಕದಲ್ಲಿ ಮೇಲಿನ ಕೆಲಸಗಳಿಗೆ ಪೂರಕವಾಗಿ, ಆದರೆ ಅವುಗಳಿಗಿಂತ ಹೆಚ್ಚು ವಿಸ್ತಾರವಾಗಿ ಶ್ರೀ ಕಾರ್ನಾಡ್ ಸದಾಶಿವ ರಾಯರು (1881-1937) ಹೇಗೆ ಕೆಲಸ ಮಾಡಿದರು ಎಂಬುದನ್ನು ಮನಮುಟ್ಟುವಂತೆ ವಿವರಿಸಿದ್ದಾರೆ. ಅವರು ಸಮರ್ಪಕವಾಗಿ ಗುರುತಿಸಿದಂತೆ, ಗಾಂಧೀಜಿ ಸತ್ಯಾಗ್ರಹ ಚಳವಳಿ ಶುರು ಮಾಡಿದಾಗ, ಅದರ ಪ್ರತಿಜ್ಞೆಗೆ ಸಹಿ ಹಾಕಿದವರಲ್ಲಿ ಕಾರ್ನಾಡರೇ ಕರ್ನಾಟಕದಲ್ಲಿ ಮೊದಲಿಗರು, ಅಲ್ಲಿಂದ ಮುಂದೆ ಗಾಂಧೀಜಿಯ ಆಪ್ತ ವಲಯದಲ್ಲಿ ಒಬ್ಬರಾಗಿ ಕೆಲಸ ಮಾಡಿದ್ದ ಅವರು ಕರಾವಳಿಯ ಸ್ವಾತಂತ್ರ್ಯ ಚಳವಳಿಯನ್ನು ರಾಷ್ಟ್ರೀಯ ಧಾರೆಗೆ ಸೇರಿಸುವ ಮಹತ್ವದ ಕೆಲಸ ಮಾಡಿದರು. ರಾಷ್ಟ್ರನಾಯಕರೊಡನೆ ಕಾರ್ನಾಡರು ಬೆಳೆಸಿಕೊಂಡಿದ್ದ ಸೌಹಾರ್ದ ಸಂಬಂಧಗಳ ಬಗ್ಗೆಯೂ ಈ ಪುಸ್ತಕ ಬೆಳಕು ಚೆಲ್ಲುತ್ತದೆ.

About the Author

ಅರವಿಂದ ಚೊಕ್ಕಾಡಿ
(21 December 1975)

 ಅರವಿಂದ ಚೊಕ್ಕಾಡಿ ಅವರು 1975ರ ಡಿಸೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಾಲೆತ್ತೋಡಿ  ಎಂಬಲ್ಲಿ ಜನಿಸಿದರು. ತಂದೆ ಕುಕ್ಕೆಮನೆ ವೆಂಕಟ್ರಮಣಯ್ಯ ಗೋಪಾಲ ಶರ್ಮ. ತಾಯಿ ಪಾರ್ವತಿ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಚಕ್ಕಾಡಿಯಲ್ಲಿ ಮುಗಿಸಿ ಪದವಿ ಪೂರ್ವ ಮತ್ತು ಬಿ.ಎ ಪದವಿಯನ್ನು ಸುಳ್ಯದ ನೆಕರೂ ಮೆಮೋರಿಯಲ್ ಕಾಲೇಜಿನಲ್ಲಿ ಪಡೆದರು. ಮಂಗಳೂರಿನ ಶಿಕ್ಷಕ ಶಿಕ್ಷಣ ಮಹಾ ವಿದ್ಯಾಲಯದಿಂದ  ಬಿ. ಇಡ್. ಪದವೀಧರರಾಗಿರುವ ಇವರು  ಕರ್ನಾಟಕ ರಾಜ್ಯ  ಮುಕ್ತ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಎಂ. ಎ ಪದವಿ ಪಡೆದರು. 2011 ರಿಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ...

READ MORE

Related Books