ಕಡಲತಡಿಯ ತಲ್ಲಣ

Author : ಪುರುಷೋತ್ತಮ ಬಿಳಿಮಲೆ

Pages 208

₹ 150.00




Year of Publication: 2009
Published by: ಸೃಷ್ಟಿ ಪಬ್ಲಿಕೇಷನ್ಸ್
Address: ನಂ. 121, 13 ನೇ ಮುಖ್ಯರಸ್ತೆ, ಎಂ. ಸಿ. ಲೇಜೌಟ್, ವಿಜಯನಗರ, ಬೆಂಗಳೂರು 560040
Phone: 9845096668

Synopsys

‘ಕಡಲತಡಿಯ ತಲ್ಲಣ ‘ ಇದು ಕರಾವಳಿ ಪ್ರದೇಶದ ಬಹು ಸಂಸ್ಕೃತಿಯ ಲೇಖನಗಳ ಸಂಕಲನ.  ಈ ಸಂಕಲದಲ್ಲಿಯೂ ಲೇಖನಗಳಿವೆ, ಕಥೆಗಳಿವೆ, ಕವನಗಳಿವೆ, ಪತ್ರವಿದೆ, ಅನುಭವ ಕಥನವಿದೆ.

ತುಳುನಾಡಿನ ಕ್ರಿಯಾಶೀಲ ಮನಸ್ಸುಗಳು ಇತ್ತೀಚೆಗೆ ಸಂಭವಿಸುತ್ತಿರುವ ಘಟನೆಗಳಿಗೆ ಹೇಗೆ ಪ್ರತಿಕ್ರಿಯಿಸಿವೆ ಮತ್ತು ಬಹುಸಂಸ್ಕೃತಿಯ ನೆಲೆಗಳು ಹೇಗೆ ವಿಸ್ತಾರವಾಗಿ ಮತ್ತು ಆಳವಾಗಿ ನೆಲೆಯೂರಿದೆ ಎಂಬುದನ್ನು ದಾಖಲಿಸುವ ಪ್ರಯತ್ನವನ್ನು ಸಂಪಾದಕಿ, ಲೇಖಕಿ ಉಷಾ ಕಟ್ಟೇಮನೆ ಮತ್ತು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ.

 

About the Author

ಪುರುಷೋತ್ತಮ ಬಿಳಿಮಲೆ
(21 August 1955)

ಡಾ.ಪುರುಷೋತ್ತಮ ಬಿಳಿಮಲೆ ಅವರು ಜನಿಸಿದ್ದು 1955 ಆಗಸ್ಟ್‌ 21ರಂದು. ನವದೆಹಲಿಯ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಡಾ.ಪುರುಷೋತ್ತಮ ಬಿಳಿಮಲೆಯವರು ಬಂಡಾಯ-ದಲಿತ ಸಾಹಿತ್ಯ ಚಳುವಳಿಯಲ್ಲಿ ನೇರವಾಗಿ ಭಾಗವಹಿಸಿದವರು, ಜನಪರ ಹೋರಾಟಗಳನ್ನು ಸಂಘಟಿಸಿದವರು. ಬಡವರ, ಹಿಂದುಳಿದವರ , ಅಲ್ಪಸಂಖ್ಯಾತರ ಮತ್ತು ದಲಿತರ ಪರವಾಗಿ ನಿರಂತರವಾಗಿ ಬರೆಯುತ್ತಲೇ ಬಂದಿರುವ ಅವರು ಸಾಹಿತ್ಯವನ್ನು ತಮ್ಮ ಹೋರಾಟಗಳಿಗೆ ಪೂರಕವಾಗಿ ಬಳಸಿಕೊಂಡಿದ್ದಾರೆ. ಜನಪದ ಸಾಹಿತ್ಯವನ್ನು ಗಂಭೀರವಾಗಿ ಅಭ್ಯಸಿಸಿರುವ ಅವರು ಆ ಮೂಲಕ ಶಿಷ್ಟ ಸಾಹಿತ್ಯದ ಕೆಲವು ಜನವಿರೋಧಿ ನೆಲೆಗಳನ್ನು ಗಂಭೀರವಾಗಿ ಪ್ರಶ್ನಿಸಿದ್ದಾರೆ. 1955ರಲ್ಲಿ ಸುಳ್ಯ ತಾಲೂಕಿನ ಪಂಜದಲ್ಲಿ ಹುಟ್ಟಿದ ಇವರು ಪುತ್ತೂರು, ಮದರಾಸು, ಮಂಗಳೂರುಗಳಲ್ಲಿ ...

READ MORE

Related Books