ಕಲೆಯ ನೆಲೆ

Author : ವಿ.ಕೃ. ಗೋಕಾಕ (ವಿನಾಯಕ)

Pages 80

₹ 68.00




Year of Publication: 2019
Published by: ಅಭಿನವ
Address: ಅಭಿನವ, 17/18-2, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040.
Phone: 9448804905 / 9448676770

Synopsys

ಕನ್ನಡ ಸಾಹಿತ್ಯ ಲೋಕದ ನೆಲೆ-ಬೆಲೆ ಎರಡನ್ನೂ ತಮ್ಮ ವಿಮರ್ಶಾತ್ಮಕ ದೃಷ್ಟಿಯಿಂದ ಕಂಡು ಬರೆದ ವಿದ್ವಾಂಸ ಡಾ. ವಿ.ಕೆ. ಗೋಕಾಕ ಅವರ ಕೃತಿ-ಕಲೆಯ ನೆಲೆ. ಕಲೆಯ ಕುರಿತು ಪೌರ್ವಾತ್ಯ ಹಾಗೂ ಪಾಶ್ಚಿಮಾತ್ಯ ಚಿಂತಕರ ಒಳನೋಟಗಳನ್ನು ವಿಮರ್ಶೆಗೆ ಒಳಪಡಿಸಿದ ವಿದ್ವತ್ ಪೂರ್ಣ ಕೃತಿ ಇದು. ಕಲಾರೂಪ ಹಾಗೂ ಸಾಹಿತ್ಯ ಸ್ವರೂಪ: ಕಲಾವಿಧಾನಗಳು, ಕಲೆ ಹಾಗೂ ಅನುಕೃತಿ ಹೀಗೆ ಮೂರು ವಿಶೇಷ ಉಪನ್ಯಾಸಗಳನ್ನು ಸಂಕಲಿಸಲಾಗಿದೆ.

1978ರಲ್ಲಿ, ಈ ಕೃತಿಯನ್ನು ಮೈಸೂರು ವಿಶ್ವವಿದ್ಯಾಲಯವು ಮೊದಲ ಬಾರಿಗೆ ಪ್ರಕಟಿಸಿತ್ತು. ಪುಟ: 59. 

 

About the Author

ವಿ.ಕೃ. ಗೋಕಾಕ (ವಿನಾಯಕ)
(09 August 1909 - 28 April 1992)

‘ವಿನಾಯಕ’ ಕಾವ್ಯನಾಮದಿಂದ ಕೃತಿಗಳ ರಚನೆ ಮಾಡಿರುವ ವಿನಾಯಕ ಕೃಷ್ಣ ಗೋಕಾಕ್ ಅವರು ಇಂಗ್ಲಿಷ್ ಮತ್ತು ಕನ್ನಡ ಸಾಹಿತ್ಯದಲ್ಲಿ ದೊಡ್ಡ ಹೆಸರು. ಕರ್ನಾಟಕದಿಂದ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದ ಮೊದಲ ವ್ಯಕ್ತಿ ಗೋಕಾಕ್ ಅವರು. ಭಾರತದಲ್ಲಿಯೇ ಅತ್ಯಂತ ಪ್ರತಿಷ್ಠಿತ ಲೇಖಕ-ಸಾಹಿತಿ ಅವರಾಗಿದ್ದರು. ಧಾರವಾಡ ಜಿಲ್ಲೆಯ (ಈಗಿನ ಹಾವೇರಿ) ಸವಣೂರಿನಲ್ಲಿ 1909ರ ಆಗಸ್ಟ್ 9ರಂದು ಜನಿಸಿದರು. ತಂದೆ ಕೃಷ್ಣರಾಯ ತಾಯಿ ಸುಂದರಮ್ಮ. ಸವಣೂರಿನಲ್ಲಿ ಶಾಲಾ ವಿದ್ಯಾಭ್ಯಾಸ ಮುಗಿಸಿ ಧಾರವಾಡದಲ್ಲಿ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದು. ಪುಣೆಯ ಫರ್ಗ್ಯೂಸನ್  ಕಾಲೇಜಿನಲ್ಲಿ ಅನಂತರ ಆಕ್ಸ್‍ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಎಂ.ಎ. ಪದವಿ ಗಳಿಸಿದರು. ಉನ್ನತ ...

READ MORE

Related Books