ಕನಸೆಂಬ ಮಾಯಾಲೋಕ

Author : ಜೆ.ಬಾಲಕೃಷ್ಣ

Pages 32

₹ 5.00

Synopsys

ವಿಶಿಷ್ಟ ವಸ್ತುವಿಷಯಗಳನ್ನು ತಮ್ಮ ಕೃತಿಗಳಿಗೆ ಆಯ್ದುಕೊಳ್ಳುವ ಜೆ. ಬಾಲಕೃಷ್ಣ ಅವರು ಕನಸಿನ ಕುರಿತು ಬರೆದ ಪುಸ್ತಕ ಇದು. ನಿದ್ದೆಯ ಸಮಯದಲ್ಲಿ ಕನಸುಗಳು ಮೂಡುವ ಮತ್ತು ಕನಸುಗಳ ಮೂಲಕ ಮನುಷ್ಯ ತನ್ನ, ಆಸೆ, ಆಕಾಂಕ್ಷೆ ಹಾಗೂ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಬಗ್ಗೆ ಇಲ್ಲಿ ವಿವರಿಸಲಾಗಿದೆ. ಅದರ ಜೊತೆಗೆ ಕನಸುಗಳು ಹೇಗೆ ಸೃಷ್ಠಿಯಾಗುತ್ತೆ ಎಂಬುದನ್ನು ವಿಶ್ಲೇಷಿಸಿ, ಆ ಕನಸುಗಳಲ್ಲಿ ಮೂಡುವ ಸಂಕೇತಗಳನ್ನು ವೈಜ್ಞಾನಿಕವಾಗಿ ವಿವರಿಸಲು ಈ ಕೃತಿಯಲ್ಲಿ ಪ್ರಯತ್ನಿಸಲಾಗಿದೆ. 

About the Author

ಜೆ.ಬಾಲಕೃಷ್ಣ

ಬೆಂಗಳೂರಿನ ಕೃಷಿವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಡಾ.ಜೆ.ಬಾಲಕೃಷ್ಣ ಅವರು ಕೃಷಿ ಸೂಕ್ಷ್ಮಜೀವಿ ಶಾಸ್ತ್ರದಲ್ಲಿ ಸ್ನಾತಕೊತ್ತರ ಹಾಗೂ ಕನ್ನಡ ಕೃಷಿ ವಿಜ್ಞಾನ ಸಾಹಿತ್ಯದ ಅಧ್ಯಾಯನಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ.ಕಾರ್‍ಟೋನಿಸ್ಟ್ ಆಗಿಯು ಗುರುತಿಸಿಕೊಂಡಿರುವ ಬಾಲಕೃಷ್ಣರವರ ಆಸಕ್ತಿಯ ಕ್ಷೇತ್ರಗಳು ಜೀವವೈವಿಧ್ಯದಷ್ಟೇ ವಿಸ್ತಾರವಾದವು. ವಿಜ್ಞಾನದಿಂದ ಮೊದಲ್ಗೊಂಡು ಸಾಹಿತ್ಯ,ಸೂಫಿ,ಝೆನ್,ತತ್ವದರ್ಶನದ ವರೆಗೂ ಅವರ ಜ್ಞಾನ ಹರಡಿಕೊಂಡಿದೆ. ...

READ MORE

Related Books