ಕಂಕಣ

Author : ತ್ರಿವೇಣಿ

Pages 200

₹ 115.00




Year of Publication: 2015
Published by: ತ್ರಿವೇಣಿ ಪಬ್ಲಿಕೇಷನ್ಸ್
Address: # 1195, ಬಾಲಕೃಷ್ಣರಾವ್, ಚಾಮರಾಜಪುರಂ, ಮೈಸೂರು-570005

Synopsys

‘ಕಂಕಣ’ ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ ತ್ರಿವೇಣಿ ಅವರ ಜನಪ್ರಿಯ ಕಾದಂಬರಿ. ತ್ರಿವೇಣಿಯವರು ತಮ್ಮ ಕಾದಂಬರಿಗಳಲ್ಲಿ ಮನೋವಿಜ್ಞಾನವನ್ನು ಬಳಸಿದ್ದರಿಂದ ಅದೊಂದು ಹೊಸ ರೀತಿಯ ಓದುಗವರ್ಗವನ್ನು ಸೃಷ್ಟಿಸಿದ್ದರು. ಹೆಣ್ಣಿನ ಬದುಕು-ಬವಣೆಗಳ ಕುರಿತಾಗಿ ಅತ್ಯಂತ ಸೂಕ್ಷ್ಮವಾಗಿ ನಿರೂಪಿತವಾಗಿರುವ ಕಾದಂಬರಿ ಕಂಕಣ. ಕೌಟುಂಬಿಕ ಜೀವನವೇ ಇಲ್ಲಿಯ ಕಥಾವಸ್ತು.

About the Author

ತ್ರಿವೇಣಿ
(29 July 1963 - 05 July 1963)

ತ್ರಿವೇಣಿ ಎಂಬ ಬರಹನಾಮದಿಂದ ಪ್ರಸಿದ್ದರಾದ ಅನುಸೂಯ ಶಂಕರ್ ರವರು ಕನ್ನಡದ ಪ್ರಮುಖ ಲೇಖಕಿಯರಲ್ಲಿ ಒಬ್ಬರು.  ತಂದೆ ಬಿ.ಎಮ್. ಕೃಷ್ಣಸ್ವಾಮಿ, ತಾಯಿ ತಂಗಮ್ಮ ಇವರ ಮಗಳಾಗಿ 1928 ರ ಸೆಪ್ಟಂಬರ್ 1 ರಂದು ಮೈಸೂರಿನಲ್ಲಿ ಇವರು ಜನಿಸಿದರು. ಹೈಸ್ಕೂಲ್ ವರೆಗಿನ ಶಿಕ್ಷಣ ಮಂಡ್ಯದಲ್ಲಿ ಹಾಗೂ ಕಾಲೇಜು ಶಿಕ್ಷಣ ಮೈಸೂರಿನಲ್ಲಿ ಆಯಿತು. 1947ರಲ್ಲಿ ಮಹಾರಾಜಾ ಕಾಲೇಜಿನಿಂದ ಮನ:ಶಾಸ್ತ್ರದಲ್ಲಿ ಚಿನ್ನದ ಪದಕದೊಂದಿಗೆ ಬಿ.ಎ.ಪದವಿ ಪಡೆದರು. ಕನ್ನಡದ ಕಣ್ವ ಬಿ.ಎಂ.ಶ್ರೀಯವರ ಸೋದರನ ಪುತ್ರಿಯಾಗಿದ್ದ ತ್ರಿವೇಣಿಯವರು ಸ್ತ್ರೀಯರು ಹೆಚ್ಚಾಗಿ ಬರೆಯದೇ ಇದ್ದ ಕಾಲದಲ್ಲಿ ಬರವಣಿಗೆ ಪ್ರಾರಂಬಿಸಿ ಕೆಲವೇ ವರ್ಷಗಳಲ್ಲಿ ಅಸಾಧಾರಣ ಜನಪ್ರಿಯತೆಯನ್ನು ಗಳಿಸಿದರು. 1953 ರಲ್ಲಿ ತ್ರಿವೇಣಿಯವರ ಮೊದಲನೆಯ ಕಾದಂಬರಿ ಪ್ರಕಟವಾಯಿತು. ಹತ್ತು ವರ್ಷಗಳಲ್ಲಿ ...

READ MORE

Related Books