ಕನ್ನಡ ಬರಹದ ಸೊಲ್ಲರಿಮೆ-4

Author : ಡಿ.ಎನ್. ಶಂಕರ ಬಟ್

Pages 132

₹ 220.00




Published by: ಡಿ.ಎನ್.ಶಂಕರ ಭಟ್
Address: ಭೀಮನಕೋಣೆ ಅಂಚೆ, ಹೊನ್ನೆಸರ, ಸಾಗರ-577418

Synopsys

ಕನ್ನಡಕ್ಕೆ ಕನ್ನಡದ್ದೇ ಆದ ವ್ಯಾಕರಣವೊಂದನ್ನು ಕಟ್ಟಿಕೊಡುವ ದಿಶೆಯಲ್ಲಿ ಶಂಕರಬಟ್ಟರ ನಾಲ್ಕನೆಯ ಕೃತಿ . ಇದರಲ್ಲಿ ಆಡುಪದಗಳು, ತೋರುಪದಗಳು ಎಂದು ಎರಡು ಭಾಗಗಳಿವೆ. ಮೊದಲನೇ ಭಾಗದಲ್ಲಿ ಸರ್ವನಾಮಗಳ ಬಳಕೆ, ನಾಮಪದಗಳು ಮತ್ತು ಸರ್ವನಾಮಗಳ ಸಂಬಂಧವ್ಯತ್ಯಾಸ ಇತ್ಯಾದಿಗಳನ್ನು ತಿಳಿಸಲಾಗಿದೆ. ಎರಡನೆಯ ಭಾಗದಲ್ಲಿ ತೋರುಪದಗಳ ವಿವಿಧ ಬಗೆಗಳು, ಪ್ರಯೋಗದ ವೈಶಿಷ್ಟ್ಯ ವಿವರಿಸಲಾಗಿದೆ.

About the Author

ಡಿ.ಎನ್. ಶಂಕರ ಬಟ್

ಹಿರಿಯ ಲೇಖಕ ಡಿ.ಎನ್. ಶಂಕರ ಬಟ್ ಅವರು ಅಂತಾರಾಷ್ಟ್ರೀಯ ಖ್ಯಾತಿಯ ಭಾಷಾಶಾಸ್ತ್ರಜ್ಞರು. ಮದ್ರಾಸ್ ವಿಶ್ವವಿದ್ಯಾಲಯದಿಂದ  ಸಂಸ್ಕೃತದಲ್ಲಿ ಸ್ನಾತಕ್ಕೋತ್ತರ ಪದವೀಧರರು.  ಪುಣೆ ವಿಶ್ವವಿದ್ಯಾಲಯದಿಂದ ನುಡಿಯರಿಮೆ(linguistics)ಯಲ್ಲಿ ಪಿ.ಎಚ್.ಡಿ.ಪದವೀಧರರು. ಅಮೇರಿಕಾದ ಸ್ಟ್ಯಾನ್ಪೋರ್‍ಡ್ ಯುನಿವರ್‍ಸಿಟಿ, ಆಸ್ಟ್ರೇಲಿಯಾದ ಲಾ ಟ್ರೋಬೆ ಯುನಿವರ್‍ಸಿಟಿ, ಬೆಲ್ಜಿಯಂ ದೇಶದ ಆಂಟ್ವೆರ್‍ಪ್ ಯುನಿವರ್‍ಸಿಟಿ, ಜರ್‍ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ಸ್ಟಿಟ್ಯೂಟ್‍ನಂತಹ ಜಗತ್ತಿನ ಹಲವಾರು ಮುಂಚೂಣಿಯ ವಿಶ್ವವಿದ್ಯಾಲಯಗಳಲ್ಲಿ ಮತ್ತು ಮಯ್ಸೂರಿನಲ್ಲಿರುವ ಬಾರತೀಯ ಬಾಶಾ ಸಂಸ್ತಾನ, ಮಣಿಪುರ ವಿಶ್ವವಿದ್ಯಾಲಯ, ಪುಣೆಯಲ್ಲಿರುವ ಡೆಕ್ಕನ್ ಕಾಲೇಜ್ ಮುಂತಾದೆಡೆ ಕಲಿಸುಗರಾಗಿ, ಅರಕೆಗಾರರಾಗಿ ಕೆಲಸ ಮಾಡಿದ್ದಾರೆ. ನುಡಿಯರಿಮೆಯ ಸುತ್ತ ಬರೆದಿರುವ ಅವರ ಹತ್ತಾರು ಹೊತ್ತಗೆಗಳು ಮತ್ತು ಅರಕೆಯ ಪೇಪರಗಳು (research papers) ಜಗತ್ತಿನೆಲ್ಲೆಡೆ ...

READ MORE

Related Books