ಕನ್ನಡ ಛಂದಃ ಸ್ವರೂಪ

Author : ಟಿ.ವಿ. ವೆಂಕಟಾಚಲಶಾಸ್ತ್ರೀ

Pages 596

₹ 333.00




Year of Publication: 2014
Published by: ಡಿ.ವಿ.ಕೆ. ಮೂರ್ತಿ ಪ್ರಕಾಶನ
Address: ಕೃಷ್ಣಮೂರ್ತಿಪುರಂ, ಮೈಸೂರು-4

Synopsys

ಖ್ಯಾತ ಸಾಹಿತಿ ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರ ಕೃತಿ-ಕನ್ನಡ ಛಂದಃ ಸ್ವರೂಪ. ಸಂಜ್ಞೆಗಳು, ಛಂದಸ್ಸು, ವೈದಿಕ ಛಂದಸ್ಸು, ಮಾತ್ರಾ ಛಂದಸ್ಸು, ಲೌಕಿಕ ಛಂದಸ್ಸು, ಅಂಶ ಛಂದಸ್ಸು, ಆಕರಗಳು, ಮೂಲತತ್ವಗಳು, ಹೊಸಗನ್ನಡ ಛಂದಸ್ಸು -ಈ ಕುರಿತ ಅಧ್ಯಾಯಗಳು ಈ ಕೃತಿಯ ಹೆಚ್ಚುಗಾರಿಕೆಯಾಗಿದೆ. ಕನ್ನಡ ವ್ಯಾಕರಣದಲ್ಲಿ ಈ ಕೃತಿಯು ಉತ್ತಮ ಹಾಗೂ ಸಂಗ್ರಹ ಯೋಗ್ಯವಾಗಿದೆ.

About the Author

ಟಿ.ವಿ. ವೆಂಕಟಾಚಲಶಾಸ್ತ್ರೀ
(26 August 1933)

ಸಂಶೋಧಕ, ಪ್ರಾಧ್ಯಾಪಕ ಟಿ.ವಿ.ವೆಂಕಟಾಚಲ ಶಾಸ್ತ್ರೀ ಅವರು ಕನ್ನಡ ಭಾಷೆಯನ್ನು ಶ್ರೀಮಂತಿಕೆ ಹೆಚ್ಚಿಸಿದವರು. ಶಾಸ್ತ್ರಿಗಳು,1933ರ ಆಗಸ್ಟ್ 26 ರಂದು, ಬೆಂಗಳೂರು ಜಿಲ್ಲೆಯ ಕನಕಪುರ ತಾಲ್ಲೂಕಿನ ಹಾರೋಹಳ್ಳಿಯಲ್ಲಿ ಜನಿಸಿದರು.  ತಂದೆ ವೆಂಕಟಸುಬ್ಬಾಶಾಸ್ತ್ರಿಗಳು. ತಾಯಿ ಸುಬ್ಬಮ್ಮ. ಎಂ.ಎ. ಮತ್ತು ಪಿಎಚ್.ಡಿ. ಪದವಿ ಪಡೆದ ನಂತರ ವೆಂಕಟಾಚಲ ಶಾಸ್ತ್ರಿಗಳು ಮೈಸೂರು ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವೃತ್ತಿಯನ್ನು ಮಾಡಿ, ನಂತರ, ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು. ಕನ್ನಡ ನಿಘಂಟು ರಚನಾ ಸಮಿತಿಯ ಸಂಪಾದಕ ಸಮಿತಿಯ ಸದಸ್ಯರಾಗಿದ್ದ ಅವರು ನಂತರ ನಿಘಂಟು ಪರಿಷ್ಕರಣ ಸಮಿತಿ ಪ್ರಧಾನ ಸಂಪಾದಕರಾಗಿದ್ದರು. ವ್ಯಾಕರಣ, ಛಂದಸ್ಸು, ...

READ MORE

Related Books