ಕನ್ನಡ ಕೈಪಿಡಿ

Author : ಕುವೆಂಪು (ಕೆ.ವಿ. ಪುಟ್ಟಪ್ಪ)

Pages 414




Year of Publication: 1988
Published by: ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ
Address: ಮೈಸೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾರ್ಯಸೌಧ, ಕ್ರಾಫರ್ಡ್‍ಭವನ. ಮೈಸೂರು - 570005
Phone: 0821 2419550

Synopsys

ಕನ್ನಡ ಸಾಹಿತ್ಯವನ್ನು ಓದುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಕನ್ನಡದ ಒಂದು ಕೈಪಿಡಿಯನ್ನು ಬರೆಸಬೇಕೆಂದು ಮೈಸೂರು ವಿಶ್ವವಿದ್ಯಾನಿಲಯದ ಅಧಿಕಾಗಳು ನಿರ್ಣಯಿಸಿ, ಕನ್ನಡ ಭಾಷೆ ಮತ್ತು ಸಾಹಿತ್ಯ -ಇವುಗಳ ವಿಷಯದಲ್ಲಿ ಇದುವರೆಗೆ ತಿಳಿವಳಿಕೆಗೆ ಬಂದಿರುವ ಮುಖ್ಯಾಂಶಗಳನ್ನು ಸಂಕ್ಷೇಪವಾಗಿ ಸೂಚಿಸಬೇಕೆಂಬುದಾಗಿಯೂ, ಪ್ರೌಢವಿಚಾರಗಳಿಗಾಗಲಿ ಇನ್ನೂ ಚರ್ಚಾಸ್ಪದವಾಗಿರತಕ್ಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ಪುಸ್ತಕವನ್ನು ರಚಿಸಲಾಗಿದೆ.

About the Author

ಕುವೆಂಪು (ಕೆ.ವಿ. ಪುಟ್ಟಪ್ಪ)
(29 December 1904 - 11 November 1994)

ಕುವೆಂಪು ಎಂಬ ಕಾವ್ಯನಾಮದಿಂದ ಸಾಹಿತ್ಯ ರಚನೆ ಮಾಡಿದ ಕವಿ, ಪ್ರಖರ ವಿಚಾರವಾದಿ-ಚಿಂತಕ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡ ಸಾಹಿತ್ಯದ ಮೇರೆಗಳನ್ನು ವಿಸ್ತರಿಸಿದವರು. ತಂದೆ ವೆಂಕಟಪ್ಪಗೌಡ ತಾಯಿ ಸೀತಮ್ಮ. ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿಯವರಾದ ಪುಟ್ಟಪ್ಪ ಜನಿಸಿದ್ದು ಚಿಕ್ಕಮಗಳೂರು ಜಿಲ್ಲೆಯ ಹಿರೇಕೂಡಿಗೆಯಲ್ಲಿ 1904ರ ಡಿಸೆಂಬರ್ 29ರಂದು. ಮನೆಯಲ್ಲೇ ಖಾಸಗಿ ಮೇಷ್ಟರ ಮೂಲಕ ಪ್ರಾರಂಭಿಕ ವಿದ್ಯಾಭ್ಯಾಸದ ನಂತರ ತೀರ್ಥಹಳ್ಳಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಮೈಸೂರಿನಲ್ಲಿ ವೆಸ್ಲಿಯನ್ ಮಿಷನ್ ಹೈಸ್ಕೂಲ್, ಮಹಾರಾಜ ಕಾಲೇಜುಗಳಲ್ಲಿ ಓದಿ ಎಂ.ಎ. ಪದವಿ (1929) ಪಡೆದರು. ಮೈಸೂರು ಮಹಾರಾಜ ಕಾಲೇಜಿನಲ್ಲಿ ಅಧ್ಯಾಪಕ (1929) ಆಗಿ ಅನಂತರ ಕ್ರಮೇಣ ಉಪಪ್ರಾಧ್ಯಾಪಕ, ...

READ MORE

Related Books