ಕನ್ನಡ ಸಣ್ಣ ಕಥೆಗಳು

Author : ಜಿ. ಎಚ್. ನಾಯಕ

Pages 390

₹ 165.00




Year of Publication: 2018
Published by: ನ್ಯಾಷನಲ್‌ ಬುಕ್ ಟ್ರಸ್ಟ್‌
Address: ಸಿದ್ದಣ್ಣ ಲೇಔಟ್, ಬನಶಂಕರಿ ಎರಡನೇ ಹಂತ, ಬೆಂಗಳೂರು

Synopsys

ಕನ್ನಡ ಸಾಹಿತ್ಯದ ಅನೇಕ ದಿಗ್ಗಜರು ಸಣ್ಣ ಕಥೆಗಳ ರಚನೆಯಲ್ಲಿ ಒಲವು ತೋರಿದ್ದಾರೆ. ಆ ಪೈಕಿ ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಆರ್.ಕೃಷ್ಣಶಾಸ್ತ್ರಿ, ಆನಂದ, ಕುವೆಂಪು, ಅಶ್ವತ್ಥ, ಚದುರಂಗ, ಕಟ್ಟೀಮನಿ, ತ.ರಾ.ಸು., ನಿರಂಜನ, ರಾಮಚಂದ್ರ ಶರ್ಮ, ಯಶವಂತ ಚಿತ್ತಾಲ, ಎ.ಕೆ.ರಾಮಾನುಜನ್, ಶಾಂತಿನಾಥ ದೇಸಾಯಿ, ಯು.ಆರ್.ಅನಂತಮೂರ್ತಿ, ಪಿ.ಲಂಕೇಶ್, ಪೂರ್ಣಚಂದ್ರ ತೇಜಸ್ವಿ, ಶ್ರೀಕೃಷ್ಣ ಆಲನಹಳ್ಳಿ, ದೇವನೂರ ಮಹಾದೇವ ಮುಂತಾದ 25 ಕಥೆಗಾರರ ಸಣ್ಣ ಕಥೆಗಳನ್ನು ಈ ಪುಸ್ತಕ ಒಳಗೊಂಡಿದೆ. ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದ ಜಿ. ಎಚ್. ನಾಯಕರು ಈ ಸಂಕಲನವನ್ನು ಹೊರತಂದಿದ್ದಾರೆ.

About the Author

ಜಿ. ಎಚ್. ನಾಯಕ
(18 September 1935)

’ಜಿ.ಎಚ್. ನಾಯಕ’ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಿರುವ ವಿಮರ್ಶಕ ಗೋವಿಂದರಾಯ ಹಮ್ಮಣ್ಣ ನಾಯಕ ಅವರು ಜನಿಸಿದ್ದು 1935ರ ಸೆಪ್ಟೆಂಬರ್ 18ರಂದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದವರು. ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕರು. ಹಂಪಿಯ ಕನ್ನಡ ವಿಶ್ವವಿದ್ಯಾಲಯ (1994-95) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕಾವ್ಯಾಧ್ಯಯನ ಪೀಠ (1996-97)ಗಳ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು. ಸಮಕಾಲೀನ (1973), ಅನಿವಾರ್ಯ (1980), ನಿರಪೇಕ್ಷ (1984), ನಿಜದನಿ (1988), ಸಕಾಲಿಕ (1995), ಗುಣಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ದಲಿತ ಹೋರಾಟ: ಗಂಭೀರ ...

READ MORE

Related Books