ಕಣ್ಣಲ್ಲಿಳಿದ ಮಳೆಹನಿ

Author : ಕಾಜೂರು ಸತೀಶ

₹ 80.00
Year of Publication: 2021
Published by: ಸಂಗಾತ ಪುಸ್ತಕ
Address: ರಾಜೂರ ಅಂಚೆ, ಗಜೇಂದ್ರಗಡ ತಾಲ್ಲೂಕು, ಗದಗ ಜಿಲ್ಲೆ- 582114
Phone: 9341757653

Synopsys

ಕಾಜೂರು ಸತೀಶ್ ಅವರ ಕವನ ಸಂಕಲನ ‘ಕಣ್ಣಲ್ಲಿಳಿದ ಮಳೆಹನಿ’. ಈ ಕೃತಿಗೆ ಎಂ.ಡಿ.ಒಕ್ಕುಂದ ಅವರು ಬೆನ್ನುಡಿಯನ್ನು ಬರೆದಿದ್ದಾರೆ. ಕಾಡು ಹಾಗೂ ಪ್ರಕೃತಿ (ನಾಶದ ವಿಷಾದ), ಕವಿತೆ ಮತ್ತು ಸಾವು ಇವರ ಸೃಜನಶೀಲತೆಯ ಕೇಂದ್ರ ಕಾಳಜಿಯಾಗಿವೆ. ಇವುಗಳೊಂದಿಗೆ ವರ್ತಮಾನದ ತಲ್ಲಣಗಳು, ಬದುಕನ್ನು ಕುರಿತಾದ ತಾತ್ವಿಕ ಜಿಜ್ಞಾಸೆಗಳೂ ಸೇರಿಕೊಂಡಿವೆ. ಇವು ಒಂದರೊಳಗೊಂದು ಬೆಸೆದೂ ಹೋಗಿವೆ. ಕನ್ನಡ ಕಾವ್ಯಕ್ಕೆ ಇವು ಹೊಸ ಸಂಗತಿಗಳೇನಲ್ಲ. ಆದರೆ ಇಲ್ಲಿಯ ಎಲ್ಲ ಕವಿತೆಗಳೂ ತಮ್ಮ ಸಂವೇದನಾಕ್ರಮ, ಪ್ರತಿಮಾವಿಧಾನ ಹಾಗೂ ಭಾಷಿಕ ಬಳಕೆಯ ಭಿನ್ನತೆ, ಸ್ವಂತಿಕೆ ಹಾಗೂ ತಾಜಾತನಗಳಂದ ಈ ಕೇಂದ್ರಗಳಿಗೆ ಹೊಸ ರೂಪಧಾರಣಿ ನೀಡಿವೆ. ಆಕರ್ಷಣೆಯನ್ನು ಸೃಷ್ಟಿಸಿವೆ. ಕಾಡನ್ನು ಕೇಂದ್ರದಲ್ಲಿರಿಸಿಕೊಂಡ ಕವಿತೆಗಳಂತೂ ಕನ್ನಡ ಕಾವ್ಯಕ್ಕೆ ಹೊಸದಾದ ಗ್ರಹಿಕೆಗಳನ್ನು, ಹೊಚ್ಚಹೊಸ ಪ್ರತಿಮೆಗಳನ್ನು ಹಾಗೂ ಭಾಷಿಕ ಆಯಾಮಗಳನ್ನು ಸೇರಿಸುವಷ್ಟು ಶಕ್ತಿಶಾಲಯಾಗಿವೆ. ಸಾವನ್ನು ಕುರಿತ ಕವಿತೆಗಳು ಭಯ ತಲ್ಲಣ ಆಘಾತ ನಿರಾಸೆಗಳಗಿಂತ ಪ್ರಬುದ್ಧವಾಗಿ ಸಾವನ್ನು ಕುರಿತಂತೆ ತಾತ್ವಿಕ ಜಿಜ್ಞಾಸೆಗೆ ತೊಡಗುತ್ತವೆ. 'ಕವಿತೆ' ಕೇಂದ್ರಿತ ಕವಿತೆಗಳು ಸೃಜನಶೀಲತೆಯ ಎಚ್ಚರದ ದಾರಿಗಳನ್ನು ಶೋಧಿಸುತ್ತವೆ. ಅತಿಭಾವುಕತೆ, ಭಾವಾವೇಶ, ವಾಗಾಡಂಬರ, ಉಪಮೆ -ರೂಪಕ ಪ್ರತಿಮೆಗಳನ್ನು ಕಟ್ಟುವ ತಿಣುಕಾಟಗಳು ವಿಜೃಂಭಿಸುವುದಿಲ್ಲ. ಒಂದು ಸಾಲು, ಒಂದು ಪದ, ಒಂದು ಅಕ್ಷರ, ಒಂದೇ ಒಂದು ಉಪಮೆ ರೂಪಕ ಪ್ರತಿಮೆಗಳನ್ನು ಅನಗತ್ಯವಾಗಿ ಬಳಸಲಾರೆ ಎಂಬ ಹಠ ತೊಟ್ಟಂತಿದೆ. ಇದು ಹೊಸತಲೆಮಾರಿಗೆ ಅಪರೂಪದ ಗುಣ ಎಂಬುದದಾಗಿ ಲೇಖಕ ಎಂ.ಡಿ.ಒಕ್ಕುಂದ ಅವರು ಹೇಳಿದ್ದಾರೆ.

About the Author

ಕಾಜೂರು ಸತೀಶ

ಕಾಜೂರು ಸತೀಸ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಗ್ರಾಮದವರು.  ಶಿಕ್ಷಣ ಇಲಾಖೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಯಾಗಿ ಸೋಮವಾರಪೇಟೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ‘ಗಾಯದ ಹೂವುಗಳು’ ಮತ್ತು ‘ಕಡಲ ಕರೆ’ ಪ್ರಕಟಿತ ಕೃತಿಗಳು ...

READ MORE

Reviews

‘ಕಣ್ಣಲ್ಲಿಳಿದ ಮಳೆಹನಿ’ ಕೃತಿಯ ವಿಮರ್ಶೆ

ಕಾಡು ಹಾಗೂ ಪ್ರಕೃತಿ (ನಾರದ ವಿಷಾದ), ಕವಿತೆ ಮತ್ತು ಸಾವು ಕಾನೂರು ಸತೀಶ್ ಅವರ ಸೃಜನಶೀಲತೆಯ ಕೇಂದ್ರ ಕಾಳಜಿಯಾಗಿವೆ. ಇವುಗಳೊಂದಿಗೆ ವರ್ತಮಾನದ ತಲ್ಲಣಗಳು, ಬದುಕನ್ನು ಕುರಿತಾದ ತಾತ್ವಿಕ ಜಿಜ್ಞಾಸೆಗಳೂ ಸೇರಿಕೊಂಡಿವೆ. ಇವು ಒಂದರೊಳಗೊಂದು ಬೆಸೆದೂ ಹೋಗಿವೆ. ಕನ್ನಡ ಕಾವ್ಯಕ್ಕೆ ಇವು ಹೊಸ ಸಂಗತಿಗಳೇನಲ್ಲ. ಆದರೆ ಇಲ್ಲಿಯ ಎಲ್ಲ ಕವಿತೆಗಳೂ ತಮ್ಮ ಸಂವೇದನಾಕ್ರಮ, ಪ್ರತಿಮಾವಿಧಾನ ಹಾಗೂ ಭಾಷಿಕ ಬಳಕೆಯ ಭಿನ್ನತೆ, ಸ್ವಂತಿಕೆ ಹಾಗೂ ತಾಜಾತನಗಳಿಂದ ಈ ಕೇಂದ್ರಗಳಿಗೆ ಹೊಸ ರೂಪಧಾರಣೆ ನೀಡಿವೆ. ಆಕರ್ಷಣೆಯನ್ನು ಸೃಷ್ಟಿಸಿವೆ. ಕಾಡನ್ನು ಕೇಂದ್ರದಲ್ಲಿರಿಸಿಕೊಂಡ ಕವಿತೆಗಳಂತೂ ಕನ್ನಡ ಕಾವ್ಯಕ್ಕೆ ಹೊಸದಾದ ಗ್ರಹಿಕೆಗಳನ್ನು, ಹೊಚ್ಚಹೊಸ ಪ್ರತಿಮೆಗಳನ್ನು ಹಾಗೂ ಭಾಷಿಕ ಆಯಾಮಗಳನ್ನು ಸೇರಿಸುವಷ್ಟು ಶಕ್ತಿಶಾಲಿಯಾಗಿವೆ. ಸಾವನ್ನು ಕುರಿತ ಕವಿತೆಗಳು ಭಯ ತಲ್ಲಣ ಆಘಾತ ನಿರಾಸೆಗಳಿಗಿಂತ ಪ್ರಬುದ್ಧವಾಗಿ ಸಾವನ್ನು ಕುರಿತಂತೆ ತಾತ್ವಿಕ ಜಿಜ್ಞಾಸೆಗೆ ತೊಡಗುತ್ತವೆ. 'ಕವಿತೆ' ಕೇಂದ್ರಿತ ಕವಿತೆಗಳು ಸೃಜನಶೀಲತೆಯ ಎಚ್ಚರದ ದಾರಿಗಳನ್ನು ಶೋಧಿಸುತ್ತವೆ.

ಅತಿಭಾವುಕತೆ, ಭಾವಾವೇಶ, ವಾಗಾಡಂಬರ, ಉಪಮೆ ರೂಪಕ ಪ್ರತಿಮೆಗಳನ್ನು ಕಟ್ಟುವ ತಿಣುಕಾಟಗಳು ವಿಜೃಂಭಿಸುವುದಿಲ್ಲ. ಒಂದು ಸಾಲು, ಒಂದು ಪದ, ಒಂದು ಅಕ್ಷರ, ಒಂದೇ ಒಂದು ಉಪಮೆ ರೂಪಕ ಪ್ರತಿಮೆಗಳನ್ನು ಅನಗತ್ಯವಾಗಿ ಬಳಸಲಾರೆ ಎಂಬ ಹಠ ತೊಟ್ಟಂತಿದೆ. ಇದು ಹೊಸತಲೆಮಾರಿಗೆ ಅಪರೂಪದ ಗುಣ

(ಕೃಪೆ : ಅಕ್ಷರ ಸಂಗಾತ, ಬರಹ : ಎಂ.ಡಿ. ಒಕ್ಕುಂದ)

---

Related Books