ಕರ್ನಾಟಕ ಗುರುಪಂಥ

Author : ರಹಮತ್ ತರೀಕೆರೆ

Pages 315

₹ 300.00




Year of Publication: 2020
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ, ಹಂಪಿ.

Synopsys

ಕರ್ನಾಟಕದ ದಾರ್ಶನಿಕ‌ ಪಂಥ ಮತ್ತು ಆಚರಣೆ ಲೋಕಗಳನ್ನು ಕುರಿತು ಡಾ. ರಹಮತ್ ತರೀಕೆರೆ ಅವರ ಐದನೆಯ ಪುಸ್ತಕ. "ಕರ್ನಾಟಕ ಗುರುಪಂಥ". ಈ ಕೃತಿ ಕಳೆದ ಐದಾರು ವರುಷಗಳ ಸುತ್ತಾಟದ ಫಲ ಎನ್ನುತ್ತಾರೆ ಲೇಖಕರು. ಗುರು-ಶಿಷ್ಯ ಪರಂಪರೆಯುಳ್ಳ‌ ಹಾಗೂ ತನ್ನೊಳಗೆ ಹಲವಾರು ಮಾರ್ಗಗಳನ್ನೂ ದಾರ್ಶನಿಕ ಪ್ರಸ್ಥಾನಗಳನ್ನೂ ಒಳಗೊಂಡಿರುವ ಒಂದು ವಿಶಾಲ ಪರಿಕಲ್ಪನೆಯಾಗಿ `ಗುರುಪಂಥ'ವನ್ನು ಇಲ್ಲಿ ಪರಿಗ್ರಹಿಸಲಾಗಿದೆ.  ತಾತ್ವಿಕವಾಗಿ ಶರಣ, ನಾಥ, ಸೂಫಿಗಳು ಗುರುಪಂಥಗಳೇ. ಆದರೆ ಅವನ್ನು ಹೊರತುಪಡಿಸಿ `ಗುರುಪಂಥ’ದ ಪರಿಕಲ್ಪನೆಯನ್ನು ಇಲ್ಲಿ ಕಟ್ಟಿಕೊಳ್ಳಲಾಗಿದೆ. ಈ ಪರಿಕಲ್ಪನೆಯೊಳಗೆ, ಕಳೆದ ನಾಲ್ಕು ಶತಮಾನದ ಹರಹಿನಲ್ಲಿ ಕಾಣಿಸಿಕೊಳ್ಳುವ ಮುನ್ನೂರಕ್ಕೂ ಮಿಕ್ಕ ಯೋಗಿಗಳೂ ತತ್ವಪದಕಾರರೂ ಬರುತ್ತಾರೆ; ಅದ್ವೈತ ಅದ್ವಯ ಮುಂತಾದ ದಾರ್ಶನಿಕ ಪ್ರಸ್ಥಾನಗಳೂ, ಆರೂಢ ಅವಧೂತ ಅಚಲದಂತಹ ಮಾರ್ಗಗಳೂ ಹಾಗೂ ಇಂಚಗೇರಿ ಗುಡಿಕಲ್ ಸಿದ್ಧಾರೂಢ ಮುಂತಾದ ಪರಂಪರೆಗಳೂ ಬರುತ್ತವೆ. ಹೀಗಾಗಿ `ಗುರುಪಂಥ’ವೆಂಬ ಪರಿಕಲ್ಪನೆಯು ಮೇಲ್ನೋಟಕ್ಕೆ ಏಕರೂಪಿಯಾಗಿ ತೋರಿದರೂ, ವಾಸ್ತವದಲ್ಲಿ ಅದೊಂದು ಬಹುರೂಪಿ ಜಗತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

 

About the Author

ರಹಮತ್ ತರೀಕೆರೆ
(26 August 1959)

ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿರುವ ರಹಮತ್ ತರೀಕೆರೆ ಅವರು ಸಂಶೋಧಕ, ವಿಮರ್ಶಕ, ಲೇಖಕ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಸಮತಳದವರಾದ (ಜ. 1959) ಅವರು ಮೈಸೂರು ವಿಶ್ವವಿದ್ಯಾಲಯದಿಂದ ಏಳು ಚಿನ್ನದ ಪದಕಗಳೊಂದಿಗೆ ಎಂ.ಎ. ಪದವಿ ಪಡೆದಿದ್ದಾರೆ. ಸ್ಪಷ್ಟ ಸೈದ್ಧಾಂತಿಕ ನಿಲುವು ಹೊಂದಿರುವ ರಹಮತ್ ಅವರು ಬಂಡಾಯ ಸಾಹಿತ್ಯ ಸಂಘಟನೆಯಲ್ಲಿದ್ದವರು. ಪಶ್ಚಿಮದ ಲೇಖಕರಿಗಿಂತ ಭಾರತೀಯ ಭಾಷೆಗಳ ಲೇಖಕರಿಂದ ಕಲಿಯುವ ಅಗತ್ಯವಿದೆಯೆಂದು ಭಾವಿಸುವ ‘ದೇಸಿವಾದಿ’ ಲೇಖಕ. ‘ಆಧುನಿಕ ಕನ್ನಡ ಕಾವ್ಯ ಮತ್ತು ಪ್ರತಿಭಟನೆ’ ವಿಷಯದ ಮೇಲೆ ಪ್ರಬಂಧ ಬರೆದು ಪಿಎಚ್.ಡಿ. ಪದವಿ ಪಡೆದಿರುವ ಅವರ ಮೊದಲ ...

READ MORE

Related Books