ಕಾರ್ತೀಕದ ಸಂಜೆ

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 186

₹ 140.00




Year of Publication: 2009
Published by: ಸುಧಾ ಎಂಟರ್‌ಪ್ರೈಸಸ್
Address: # 3036, 5ನೇ ಮುಖ್ಯರಸ್ತೆ, ಬಿ.ಎಸ್.ಕೆ 2ನೇ ಹಂತ, 14ನೇ ಕ್ರಾಸ್ ರೋಡ್, ತ್ಯಾಗರಾಜ ನಗರ, ಬೆಂಗಳೂರು-560070
Phone: 9845449811

Synopsys

ಖ್ಯಾತ ಕಾದಂಬರಿಗಾರ್ತಿ ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ) ಅವರು ರಚಿಸಿದ ಸಾಮಾಜಿಕ ಕಾದಂಬರಿ-ಕಾರ್ತೀಕದ ಸಂಜೆ. ಸಾಮಾಜಿಕ ವಿಷಯ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ. ಬದುಕು, ಪ್ರೇಮ, ನಿಸರ್ಗ, ಕುಟುಂಬ, ವೈಮನಸ್ಸು, ತ್ಯಾಗ ಹೀಗೆ ಸುತ್ತಲಿನ ಪರಿಸರದಲ್ಲಿಯ ಪ್ರತಿಯೊಂದು ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಕಾದಂಬರಿಯ ವಸ್ತುವಿನ ಆಯ್ಕೆಯ ಪ್ರಕ್ರಿಯೆಯು ಈ ಲೇಖಕಿಯ ಬರಹವು ಓದುಗರನ್ನು ಸೆಳೆಯುವ ಪ್ರಮುಖ ಅಂಶವಾಗಿದೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books