ಕಸದಿಂದ ಅದ್ಭುತ ಆಟಿಕೆಗಳು ಮತ್ತು ಪ್ರಯೋಗಗಳು

Author : ವಿ.ಎಸ್.ಎಸ್. ಶಾಸ್ತ್ರಿ

Pages 56

₹ 65.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 0802216 1900

Synopsys

ಅರವಿಂದ ಗುಪ್ತ ಅವರು ಇಂಗ್ಲಿಷಿನಲ್ಲಿಯ ಕೃತಿಯನ್ನು ಲೇಖಕ ವಿ.ಎಸ್.ಎಸ್. ಶಾಸ್ತ್ರಿ ಅವರು ಕನ್ನಡಕ್ಕೆ ಅನುವಾದಿಸಿದ್ದೇ-ಕಸದಿಂದ ಅದ್ಭುತ ಆಟಿಕೆಗಳು ಮತ್ತು ಪ್ರಯೋಗಗಳು. ಕಸದಿಂದ ರಸ ತೆಗೆಯುವುದು ಎಂಬ ಮಾತೊಂದಿದೆ. ಅದನ್ನು ಸಾಬೀತುಪಡಿಸಲು ಎಂಬಂತೆ ಮಾದರಿಯಾಗಿ ಈ ಕೃತಿ ಮೂಡಿಬಂದಿದೆ. ಮಕ್ಕಳ ಮನೋವಿಕಾಸದ ದೃಷ್ಟಿಯಿಂದ ಅತ್ಯಂತ ಪರಿಣಾಮಕಾರಿ ಕೃತಿ ಇದು. ಮಕ್ಕಳ ಕಲ್ಪನಾ ಲೋಕವನ್ನು ವಿಸ್ತರಿಸಲು ನೆರವಾಗುವಂತಿದೆ ಈ ಕೃತಿ. ನಿರುಪಯುಕ್ತವಾದ ವಸ್ತುಗಳಿಂದ ಉಪಯೋಗಕ್ಕೆ ಬರುವಂತೆ ಆಟಿಕೆಗಳನ್ನು ತಯಾರಿಸುವ ಪ್ರಕ್ರಿಯೆಯು ಈ ಕೃತಿಯಲ್ಲಿ ತುಂಬಾ ಪರಿಣಾಮಕಾರಿಯಾಗಿ ತೋರಿಸಲಾಗಿದೆ.

About the Author

ವಿ.ಎಸ್.ಎಸ್. ಶಾಸ್ತ್ರಿ

ಒರಿಗಾಮಿ ಗಣಿತದ ಬಗ್ಗೆ ಅಧಿಕೃತವಾಗಿ ಮಾತನಾಡಬಲ್ಲ ಕೆಲವೇ ಕೆಲವರಲ್ಲಿ ವಿ.ಎಸ್.ಎಸ್. ಶಾಸ್ತ್ರಿ ಒಬ್ಬರು. ನವಕರ್ನಾಟಕದ ಗಣಿತ ಸಂವತ್ಸರ ಮಾಲೆಯ ಸಂಪಾದಕರ ಪೈಕಿ ಇವರೂ ಒಬ್ಬರು.  ಗಣಿತ ಮತ್ತು ವಿಜ್ಞಾನ ಕುರಿತು ಹಲವು ಕೃತಿಗಳನ್ನು ರಚಿಸಿದ್ದಾರೆ. ಅರವಿಂದ ಗುಪ್ತ ಅವರ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಗಣಿತ ಚಟುವಟಿಕೆಗಳು, ಆಹಾ ಎಷ್ಟೊಂದು ಚಟುವಟಿಕೆಗಳು, ಸೌರಶಕ್ತಿಯ ಕತೆ, ತ್ಯಾಜ್ಯವಸ್ತುಗಳಿಂದ ವಿಜ್ಞಾನ-ಆಟಿಕೆಗಳು ಮುಂತಾದವು ಪ್ರಮುಖ ಕೃತಿಗಳು. ಇವರಿಗೆ ವಿಜ್ಞಾನ ಸಂವಹನಕಾರ ಪ್ರಶಸ್ತಿಯು ಲಭಿಸಿದೆ.  ...

READ MORE

Related Books