ಕಥೆ ಚಿತ್ರಕಥೆ ಸಂಭಾಷಣೆ ಜೋಗಿ

Author : ಜೋಗಿ (ಗಿರೀಶ್ ರಾವ್ ಹತ್ವಾರ್)

Pages 352

₹ 300.00




Year of Publication: 2016
Published by: ಸಾವಣ್ಣ ಎಂಟರ್‌ಪ್ರೈಸಸ್
Address: ಗಾಂಧಿಬಜಾರ್‌, ಬಸವನಗುಡಿ, ಬೆಂಗಳೂರು

Synopsys

ಸಿನಿಮಾ ಕ್ಷೇತ್ರದ ಅನುಭವ ಕುರಿತು ಜೋಗಿ (ಗಿರೀಶ ರಾವ್ ಹತ್ವಾರ) ಅವರು ಬರೆದಿರುವ ಕೃತಿ ‘ಕಥೆ ಚಿತ್ರಕಥೆ ಸಂಭಾಷಣೆ ಜೋಗಿ’. ಕೃತಿಯ ಕುರಿತು ಪ್ರಕಾಶ್‌ ರೈ ಅವರು ಬರೆಯುತ್ತಾ ‘ಸಿನಿಮಾ ಮಾಡುವವರ ಪಾಲಿಗೆ ಬಹುಮಖ್ಯ ಕೈಪಿಡಿ’ ಎಂದಿದ್ದಾರೆ. ಸಿನಿಮಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವವರು ತಿಳಿದಿರಬೇಕಾದ ಅಂಶಗಳ ಕುರಿತು ಪ್ರಸ್ತುತ ಕೃತಿಯು ವಿವರಿಸುತ್ತದೆ.

About the Author

ಜೋಗಿ (ಗಿರೀಶ್ ರಾವ್ ಹತ್ವಾರ್)
(16 November 1965)

ಜೋಗಿ, ಜಾನಕಿ, ಎಚ್‌. ಗಿರೀಶ್‌ ರಾವ್, ಸತ್ಯವ್ರತ...... ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್‌ ರಾವ್‌ ಹತ್ವಾರ್‌ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ಜೋಗಿ ಅವರು ಹುಟ್ಟಿದ್ದು 1965 ನವೆಂಬರ್‌ 16ರಂದು. ಮೂಲತಃ ಸೂರತ್ಕಲ್‌ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.  ಹಾಯ್‌ ಬೆಂಗಳೂರು ವಾರಪತ್ರಿಕೆಯಲ್ಲಿ ‘ರವಿ ಕಾಣದ್ದು’, ‘ಜಾನಕಿ ಕಾಲಂ’ ಅಂಕಣ ಬರಹಗಳ ಮೂಲಕ ಓದುಗರಿಗೆ ಪರಿಚಯವಾದ ಜೋಗಿ ಅವರು ಪ್ರಸ್ತುತ ಕನ್ನಡ ಪ್ರಭ ದಿನಪತ್ರಿಕೆಯಲ್ಲಿ ಪುರವಣಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ವೃತ್ತಿ ಜೊತೆ ಜೊತೆಗೆ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಇವರು ಹಲವಾರು ಕೃತಿಗಳನ್ನು ...

READ MORE

Related Books