‘ಕೆಂಡ ಸಂಪಿಗೆ’ ಲೇಖಕ ಡಾ. ಬಸವರಾಜ ಸಬರದ ಅವರ 9ನೇ ಕವನ ಸಂಕಲನ. ತಮ್ಮ ಭಾಷೆ, ಮತ್ತು ಸಾಮಾಜಿಕ ಬದ್ಧತೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಅಸ್ಮಿತೆಯನ್ನು ಕಟ್ಟಿಕೊಂಡಿರುವ ಬಸವರಾಜ ಸಬರದ ಅವರ ಕವಿತೆಗಳು ಸಾಮಾಜಿಕ ಹೋರಾಟದ ಅಸ್ತ್ರಗಳಂತೆಯೂ ಸ್ಥಾನಪಡೆದಿವೆ. ಈ ಜನಪರ ಚಳುವಳಿಗಳ ಜೊತೆ ಬೆಳೆದ ಬಂಡಾಯ ಬರಹಗಾರರಾದ ಬಸವರಾಜ ಸಬರದ ಅವರ ಕೆಂಡ ಸಂಪಿಗೆ ಹೆಸರೇ ಸೂಚಿಸುವಂತೆ ಕೆಂಡ ಸಂಪಿಗೆಯಂತಹ ಕವಿತೆಗಳು ಇಲ್ಲಿ ಸಂಕಲನಗೊಂಡಿವೆ.
ಬಸವರಾಜ ಸಬರದ ಅವರು ಮೂಲತಃ ಕೊಪ್ಪಳ ಜಿಲ್ಲೆ ಯಲಬುರ್ಗ ತಾಲ್ಲೂಕಿನ ಕುಕನೂರಿನವರು. ಹುಟ್ಟಿದ್ದು 1954 ಜೂನ್ 20ರಂದು. ತಾಯಿ ಬಸಮ್ಮ, ತಂದೆ ಬಸಪ್ಪ ಸಬರದ. ಹುಟ್ಟೂರು ಕುಕನೂರಿನಲ್ಲಿಯೇ ಪ್ರಾಥಮಿಕ ಶಿಕ್ಷಣ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್ಡಿ ಪದವಿ ಪಡೆದರು. ಉಪನ್ಯಾಸಕರಾಗಿ ವೃತ್ತಿ ಆರಂಭಿಸಿದ ಇವರು ಹಲವಾರು ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕವಾಗಿ ಮಾತ್ರವಲ್ಲದೇ ದೇವದಾಸಿ ವಿಮೋಚನಾ ಹೋರಾಟ, ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ, ಅಸ್ಪೃಶ್ಯತಾ ನಿವಾರಣೆ, ದಲಿತ-ಬಂಡಾಯ ಚಳವಳಿ ಮುಂತಾದ ಸಾಮಾಜಿಕ ಹೋರಾಟಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನನ್ನವರ ಹಾಡು, ಹೋರಾಟ, ...
READ MORE