ಕಿಚ್ಚಿಲ್ಲದ ಬೇಗೆಯಲ್ಲಿ ಬೆಂದೆನವ್ವಾ

Author : ಗೀತಾ ನಾಗಭೂಷಣ

Pages 784

₹ 480.00




Year of Publication: 2012
Published by: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನ
Address: ಸರಸ್ವತಿ ಗೋದಾಮ ಕಲಬುರಗಿ-585101
Phone: 988002088

Synopsys

ಕೆಳವರ್ಗದ ಜನರ ನೋವು ನಲಿವು, ನಗು - ಅಳು, ಸುಖ- ದು:ಖಗಳನ್ನು ಅವರದೇ ಪರಿಭಾಷೆಯಲ್ಲಿ ನಿರೂಪಿಸಿದ್ದಾರೆ ಕತೆಗಾರ್ತಿ ಗೀತಾ ನಾಭೂಷಣ್. ಜೋಪಡಿಯಲ್ಲಿ ವಾಸಿಸುತ್ತ ಬದುಕಿನಲ್ಲಿ ಬೇಯುತ್ತಲೆ ಲೌಕಿಕದಲ್ಲಿ ಚಿತ್ತವಾಗುವ ಅವರ ಮನಸ್ಸಿನ ಅಭಿವ್ಯಕ್ತಿಯನ್ನು ಚಿತ್ರಿಸುವ ಕತೆಗಳು ‘ಕಿಚ್ಚಿಲ್ಲದ ಬೇಗೆಯಲ್ಲಿ ಬೆಂದೆನವ್ವಾ’. ಬಡತನದಿಂದ ಬೇಸತ್ತು, ಸುಖಕ್ಕಾಗಿ ಸರಿ ತಪ್ಪುಗಳ ಅರಿವನ್ನು ಮೀರಿ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಮಗ್ರ ಚಿತ್ರಣ ಈ ಕತಾ ಸಂಕಲನದಲ್ಲಿದೆ.

 

About the Author

ಗೀತಾ ನಾಗಭೂಷಣ
(25 March 1942 - 28 June 2020)

ಕನ್ನಡದ ಲೇಖಕಿಯರಲ್ಲಿ ಒಬ್ಬರಾದ ಗೀತಾ ನಾಗಭೂಷಣ ಅವರು ತಮ್ಮ ಕಾದಂಬರಿ-ಕತೆಗಳ ಮೂಲಕ ಜನಪ್ರಿಯರಾದವರು. ಗುಲ್ಬರ್ಗದ ಬಡ ಕುಟುಂಬದಲ್ಲಿ 1942ರ ಮಾರ್ಚ್ 25ರಂದು ಜನಿಸಿದರು. ತಂದೆ ಶಾಂತಪ್ಪ-ತಾಯಿ ಶರಣಮ್ಮ. ಮೆಟ್ರಿಕ್ ಮುಗಿಸಿದ ಮೇಲೆ ಕೆಲವುಕಾಲ ಕಲೆಕ್ಟರ್ ಕಛೇರಿಯಲ್ಲಿ ಉದ್ಯೋಗ ಮಾಡಿ ಬೆಳಗಿನ ಶಾಲೆಯಲ್ಲಿ ಓದಿ ಪದವಿ ಪಡೆದು, ಸಂಜೆ ಕಾಲೇಜಿನಲ್ಲಿ ಓದಿ ಬಿಎಡ್ ಮತ್ತು ಎಂ.ಎ. ಪದವಿ ಗಳಿಸಿದರು. ಓದುವಾಗಲೇ ಉದ್ಯೋಗ ಮಾಡುತ್ತಿದ್ದ ಇವರು ಎಂ.ಎ. ಪದವಿ ಗಳಿಸಿದ ನಂತರ ಶ್ರೀ ನಗರೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ, ಪ್ರಾಧ್ಯಾಪಕಿಯಾಗಿ, ಪ್ರಾಚಾರ್ಯೆಯಾಗಿ 30ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದರು. ...

READ MORE

Related Books