ಕೊಮಾರ ರಾಮಯ್ಯನ ಚರಿತ್ರೆ

Author : ಎಂ.ಎಂ. ಕಲಬುರ್ಗಿ

Pages 412

₹ 200.00




Year of Publication: 2000
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಾಲಯ, ಹಂಪಿ.

Synopsys

ಅನಾಮಧೇಯ ಕವಿಯೊಬ್ಬ ಕಂಪಿಲರಾಜ್ಯದ ಕುಮ್ಮಟದುರ್ಗದ ಮಹಾವೀರ ಕುಮಾರರಾಮನ ಬಗ್ಗೆ ರಚಿಸಿದ ‘ಕೊಮಾರ ರಾಮಯ್ಯನ ಚರಿತ್ರೆ'ಯನ್ನು ಇಲ್ಲಿ ಸಂಪಾದಿಸಲಾಗಿದ್ದು ಐತಿಹಾಸಿಕ ಹಾಗೂ ಸಾಂಸ್ಕೃತಿಕ ವೀರನ ಬದುಕು-ಸಾಹಸದ ಬಗ್ಗೆ ಈ ಕಾವ್ಯ ಸಾಕಷ್ಟು ಮಾಹಿತಿಗಳನ್ನು ನೀಡುತ್ತದೆ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books