ಕ್ಷಿತಿಜ

Author : ಶಾಂತಿನಾಥ ದೇಸಾಯಿ

Pages 104

₹ 60.00




Year of Publication: 2015
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018

Synopsys

ಖ್ಯಾತ ಸಾಹಿತಿ, ಕಾದಂಬರಿಕಾರ ಶಾಂತಿನಾಥ ದೇಸಾಯಿ ಅವರ ಕೃತಿ-ಕ್ಷಿತಿಜ. ಮನೆ-ಮನದ ಭಾವನೆಗಳ ಕಥಾ ಹಂದರವಿರುವ ಕತೆಗಳ ಸಂಕಲನವಿದು. ಕ್ಷಿತಿಜ, ಅಂಟಿದ ನಂಟು, ದಿಗ್ಭ್ರಮೆ, ಗಂಡ ಸತ್ತ ಮೇಲೆ, ಅಕಾಲ ಮತ್ತು ಬೇಸರ ಹೀಗೆ ಆರು ಕತೆಗಳಿವೆ. ಪ್ರತಿ ಕಥೆಯು ಸಂಸಾರದ ವಿವಿಧ ಬಗೆಯ ಪರಿಗಳನ್ನು ಹೇಳುತ್ತವೆ. ಕಥಾ ವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ.  

About the Author

ಶಾಂತಿನಾಥ ದೇಸಾಯಿ
(22 July 1929 - 26 March 1998)

ನವ್ಯಕಾದಂಬರಿಕಾರರು, ವಿಮರ್ಶಕರು, ಕಥೆಗಾರರೆಂದೇ ಪ್ರಸಿದ್ಧರಾಗಿದ್ದ ಶಾಂತಿನಾಥ ದೇಸಾಯಿಯವರು ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ. ಪ್ರಾಥಮಿಕ ಮತ್ತು ಮೆಟ್ರಿಕ್ ವಿದ್ಯಾಭ್ಯಾಸವನ್ನು ಧಾರವಾಡದಲ್ಲಿ ಮುಗಿಸಿದರು. ಮುಂದೆ ಮುಂಬಯಿಯ ವಿಲ್ಸನ್ ಕಾಲೇಜಿನಿಂದ ಬಿ.ಎ. ಹಾಗೂ ಎಂ.ಎ. ಪದವಿ ಪಡೆದರು. ಆನಂತರ ಬ್ರಿಟಿಷ್ ಸ್ಕಾಲರ್‌ಷಿಪ್ ಪಡೆದು ಲೀಡ್ಸ್ ವಿಶ್ವವಿದ್ಯಾಲಯದಲ್ಲಿ ಹೆಚ್ಚಿನ ಅಧ್ಯಯನ ಮಾಡಿದರು.ಅಲ್ಲಿಂದ  ಹಿಂದಿರುಗಿ ಬಂದನಂತರ ಕರ್ನಾಟಕ ವಿಶ್ವವಿದ್ಯಾಲಯ, ಕೊಲ್ಲಾಪುರದ ಶಿವಾಜಿ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪ ಪ್ರಾಧ್ಯಾಪಕರಾಗಿ, ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ನಂತರ 1988ರಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸಲ್ಲಿಸಿದ ಸೇವೆಸಲ್ಲಿಸಿದರು. ಕರ್ನಾಟಕ ಮತ್ತು ಕೇಂದ್ರ ಸಾಹಿತ್ಯ ಅಕಾಡಮಿ ಮತ್ತು ಜ್ಞಾನಪೀಠ ...

READ MORE

Related Books