ಕುದಿಯುವ ಕುಲುಮೆ

Author : ದೊಡ್ಡರಂಗೇಗೌಡ

Pages 164

₹ 113.00




Year of Publication: 2014
Published by: ಐಬಿಎಚ್ ಪ್ರಕಾಶನ
Address: #77, 2ನೇ ಮುಖ್ಯರಸ್ತೆ, ರಾಮರಾವ್ ಲೇಔಟ್, ಬಿಎಸ್ ಕೆ 3ನೇ ಹಂತ, ಬೆಂಗಳೂರು- 560085,
Phone: 9845070613

Synopsys

ಸಾಹಿತಿ ದೊಡ್ಡರಂಗೇಗೌಡರ ಕೃತಿ-ಕುದಿಯುವ ಕುಲುಮೆ. ಅವರ ಸಮಗ್ರ ಕಾವ್ಯ ಸಂಪುಟವಿದು. ಸಾಹಿತ್ಯದ ವಿವಿಧ ಪ್ರಕಾರಗಳ ಪೈಕಿ ಕಾವ್ಯದಲ್ಲೇ ಹೆಚ್ಚಿನ ಕೃಷಿ ಮಾಡಿರುವ ದೊಡ್ಡರಂಗೇಗೌಡರು ಹತ್ತು ಹಲವು ಕವನ ಸಂಕಲನಗಳನ್ನು ಪ್ರಕಟಿಸಿದ್ದು, ಆ ಎಲ್ಲ ಕಾವ್ಯಗಳ ಸಮಗ್ರ ಸಂಪುಟವನ್ನು ‘ಕುದಿಯುವ ಕುಲುಮೆ’ಯಡಿ ಪ್ರಕಟಿಸಿದ್ದಾರೆ.

About the Author

ದೊಡ್ಡರಂಗೇಗೌಡ
(07 February 1946)

ಕವಿ, ಸಾಹಿತಿ ಮನುಜ ಕಾವ್ಯನಾಮದ ಮೂಲಕ ಪರಿಚಿತರಾಗಿರುವ ದೊಡ್ಡರಂಗೇಗೌಡ ಅವರು, ತುಮಕೂರು ಜಿಲ್ಲೆ ಕುರುಬರಹಳ್ಳಿಯಲ್ಲಿ 1946 ಫೆಬ್ರುವರಿ 7ರಂದು ಜನಿಸಿದರು. ತಂದೆ ರಂಗೇಗೌಡ, ತಾಯಿ ಅಕ್ಕಮ್ಮ.  ಬೆಂಗಳೂರು ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಇವರು, ‘ಕನ್ನಡ ನವೋದಯ ಕಾವ್ಯ- ಒಂದು ಪುನರ್‌ಮೌಲ್ಯಮಾಪನ ’ ಎಂಬ ಪ್ರಬಂಧ ಮಂಡಿಸಿ ಪಿಎಚ್‌ಡಿ ಪಡೆದರು. ಬೆಂಗಳೂರಿನ ಎಸ್‌.ಎಲ್‌.ಎನ್‌ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.  ಕಾಲೇಜು ದಿನಗಳಲ್ಲೇ ಕವನ, ಕತೆ ರಚನೆಯಲ್ಲಿ ತೊಡಗಿಕೊಂಡಿದ್ದ ಇವರು ಸುಮಾರು 500ಕ್ಕೂ ಹೆಚ್ಚು ಚಲನಚಿತ್ರ ಗೀತೆಗಳನ್ನು ಬರೆದಿದ್ದಾರೆ. ಕಾವ್ಯ, ವಿಮರ್ಶಾ ಕೃತಿಗಳು, ಭಾವಗೀತೆ ಹಾಗೂ ...

READ MORE

Related Books