ಕುಮಾರರಾಮ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 464

₹ 350.00




Year of Publication: 2016
Published by: ಅನುಗ್ರಹ ಪ್ರಕಾಶನ
Address: ಮೈಸೂರು

Synopsys

ಲೇಖಕ ಸು. ರುದ್ರಮೂರ್ತಿ ಶಾಸ್ತ್ರಿ ಅವರ ಐತಿಹಾಸಿಕ ಕಾದಂಬರಿ-ಕುಮಾರ ರಾಮ. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಬಳ್ಳಾರಿ ಜಿಲ್ಲೆ) ವೀರ ರಾಜಕುಮಾರನಾದ ಕುಮಾರರಾಮ ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಇಂಥಹ ಉದಾತ್ತ ಗುಣಗಳಿಂದ ಮಾತ್ರವಲ್ಲ; ಪರನಾರಿ ಸಹೋದರನೆಂಬ ಖ್ಯಾತಿ ಪಡೆದಿದ್ದ. ಈತನ ಚಾರಿತ್ಯ್ರ ಕುರಿತು ಇಂದಿಗೂ ಚಾರಿತ್ರಿಕ ಘಟನೆಗಳ ಉಲ್ಲೇಖನಗಳು ಸಿಕ್ಕುತ್ತವೆ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ಧಿ. ಇಂತಹ ವೀರ ರಾಜಕುಮಾರನ ಕಥೆ ಆಧರಿಸಿದ ಕಾದಂಬರಿ ಇದು.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books